Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ತಾಲೂಕು ಯುವ ಬಂಟರ ವೇದಿಕೆಯಿಂದ ಬಡ ಕುಟುಂಬಕ್ಕೆ ಉಚಿತ ಮನೆ ಹಸ್ತಾಂತರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಂದೂರು ಬಂಟರ ಯಾನೆ ನಾಡವರ ಸಂಘ ಹಾಗೂ ಬೈಂದೂರು ತಾಲೂಕು ಯುವ ಬಂಟರ ವೇದಿಕೆಯಿಂದ ಕಡು ಬಡತನದಲ್ಲಿರುವ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ಕಾಲ್ತೋಡು ಗ್ರಾಮದ ಸಾಂತನಾಡಿ ನಿವಾಸಿ ನಾಗಮ್ಮ ಶೆಡ್ತಿ ಕುಟುಂಬದವರಿಗೆ ನಿರ್ಮಿಸಿಕೊಡಲಾದ ಮನೆಯನ್ನು ಹಸ್ತಾಂತರ ಮಾಡಲಾಯಿತು.

ಉದ್ಯಮಿ ಗೋಕುಲ ಶೆಟ್ಟಿ ಉಪ್ಪುಂದ ನೂತನ ಮನೆಯನ್ನು ಉದ್ಘಾಟಿಸಿದರು. ಈ ಸಂದರ್ಭ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ಕಾರ್ಯದರ್ಶಿ ಜಗದೀಶ ಶೆಟ್ಟಿ ಕುದ್ರುಗೋಡು, ಬಂಟರ ಯುವ ವೇದಿಕೆ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಉಪಾಧ್ಯಕ್ಷ ವಿಜಯ ಶೆಟ್ಟಿ ಮುರೂರು, ಗೌರವಾಧ್ಯಕ್ಷ ಪ್ರಜ್ವಲ್ ಶೆಟ್ಟಿ ಕಬ್ಸೆ, ಪೂರ್ವಾಧ್ಯಕ್ಷ ಸುಧಾಕರ ಶೆಟ್ಟಿ ನೆಲ್ಯಾಡಿ ಹಾಗೂ ಬಂಟರ ಸಂಘ, ಯುವ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರದೀಪ್ ಶೆಟ್ಟಿ ಅಲ್ಸಾಡಿ ಕಾರ್ಯಕ್ರಮ ನಿರೂಪಿಸಿದರು.

Exit mobile version