ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ನೀಟ್, ಸಿ.ಇ.ಟಿ, ಜೆ.ಇ.ಇ ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.
ಭಂಡಾರ್ಕಾರ್ಸ್ ಪದವಿ ಕಾಲೇಜಿನ ಭೌತಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ. ಶಶಿಕಾಂತ್ ಹತ್ವಾರ್ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.
ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಜಿ. ಎಂ. ಗೊಂಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ರಿತೇಶ್ ವಂದಿಸಿದರು.

