Kundapra.com ಕುಂದಾಪ್ರ ಡಾಟ್ ಕಾಂ

ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಸಾಫ್ಟವೇರ್ ಲ್ಯಾಬ್ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನಾ ಸಮಾರಂಭ ಇತ್ತಿಚಿಗೆ ಜರುಗಿತು.

ಕರ್ನಾಟಕ ಬ್ಯಾಂಕ್ ಎಮ್.ಡಿ. ಮತ್ತು ಸಿ.ಇ.ಒ. ಮಹಾಬಲೇಶ್ವರ ಎಮ್.ಎಸ್., ಉದ್ಘಾಟಿಸಿ ಮಾತನಾಡಿ, ಅವರು ವಿದ್ಯಾರ್ಥಿಗಳು ಕಷ್ಟಪಟ್ಟು ಓದಬೇಡಿ, ಇಷ್ಟಪಟ್ಟು ಓದಿ, ಆದರೆ ಚಾತುರ‍್ಯತೆಯಿಂದ ಕೆಲಸ ಮಾಡಲು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಉಪಸ್ಥಿತರಿದ್ದರು.

ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು ಹಾಗೂ ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಮ್. ಸುಕುಮಾರ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವ್ಯವಸ್ಥಾಪನಾ ಸಮಿತಿಯ ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ. ಸುಧಾಕರ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು, ಉಪನ್ಯಾಸಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version