Site icon Kundapra.com ಕುಂದಾಪ್ರ ಡಾಟ್ ಕಾಂ

ದ್ವಿತೀಯ ಪಿಯು ಫಲಿತಾಂಶ: ಆರ್.ಎನ್. ಶೆಟ್ಟಿ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸ್ಥಳೀಯ ಆರ್. ಎನ್. ಶೆಟ್ಟಿ ಪದವಿಪೂರ್ವ ಕಾಲೇಜು ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ 94.58% ರ ಫಲಿತಾಂಶವನ್ನು ಸಾಧಿಸಿದೆ. ವಿಜ್ಞಾನ ವಿಭಾಗದಲ್ಲಿ ಹರ್ಷಿತಾ ಕಿಣಿ 591 ಅಂಕಗಳನ್ನು ಪಡೆದು ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದರೆ, ಪ್ರಗತಿ ಪೂಜಾರಿ 590 ಅಂಕ ಪಡೆದು 9ನೇ ಸ್ಥಾನಗಳಿಸಿರುತ್ತಾರೆ.

ವಾಣಿಜ್ಯ ವಿಭಾಗದಲ್ಲಿ ಗುರುರಾಜ್ 588 ಅಂಕಗಳನ್ನು ಪಡೆದು ರಾಜ್ಯಕ್ಕೆ 9ನೇ ಸ್ಥಾನ ಪಡೆದಿರುತ್ತಾನೆ ಹಾಗೂ ಪ್ರಥ್ವಿ ಎಂ. 586 ಅಂಕ ಪಡೆದು ರಾಜ್ಯಕ್ಕೆ 11ನೇ ಸ್ಥಾನ ಪಡೆದಿದ್ದಾರೆ.

ಪರೀಕ್ಷೆಯನ್ನು ಬರೆದಿದ್ದ 388 ವಿದ್ಯಾರ್ಥಿಗಳ ಪೈಕಿ 179 ಮಂದಿ ವಿಶೇಷ ಶ್ರೇಣಿ ಹಾಗೂ 155 ಮಂದಿ ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರು ಹಾಗೂ ಬೈಂದೂರಿನ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅಭಿನಂದಿಸಿದ್ದಾರೆ.

Exit mobile version