Kundapra.com ಕುಂದಾಪ್ರ ಡಾಟ್ ಕಾಂ

ಸೈಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆ: ಪಠ್ಯೇತರ ಚಟುವಟಿಕೆ, ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಸೈಂಟ್ ಥಾಮಸ್ ಹೈಯರ್ ಪ್ರೈಮರಿ ಸ್ಕೂಲ್ ಮತ್ತು ಪದವಿಪೂರ್ವ ಕಾಲೇಜಿನ ಪಠ್ಯೇತರ ಚಟುವಟಿಕೆಗಳು ಮತ್ತು ವಿದ್ಯಾರ್ಥಿ ಸಂಸತ್ತು ಉದ್ಘಾಟನಾ ಸಮಾರಂಭ ಶನಿವಾರ ಜರುಗಿತು.

ರತ್ತುಬಾಯಿ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಆನಂದ ಎನ್. ಮದ್ದೋಡಿ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ನಾಯಕತ್ವದ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದ ಅವರು ವಿದ್ಯಾರ್ಥಿ ಸಂಸತ್ತಿನ ಮಹತ್ವ, ವಿದ್ಯಾರ್ಥಿ ಮತ್ತು ಶಿಕ್ಷಕರ ಬಾಂಧವ್ಯವದ ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ಫಾದರ್ ಜೈಶನ್ ನೆಲಿವಿಲ್ಲಾ ಮಾತನಾಡಿ ನಾಯಕತ್ವದ ಗುಣವನ್ನು ವಿದ್ಯಾರ್ಥಿ ಜೀವನದಲ್ಲೇ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು ಎಂದರು.

ಪಿಯುಸಿ ಪ್ರಾಂಶುಪಾಲರಾದ ರೂಬೆಲ್ ಐರಾವಲಿ, ವಿದ್ಯಾರ್ಥಿ ನಾಯಕ ಕುಮಾರ ನಿಶಾಂತ್ ಕಿಣಿ, ವಿದ್ಯಾರ್ಥಿ ನಾಯಕಿ ಕುಮಾರಿ ಅಂಕಿತಾ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಪೋಷಕ ಪ್ರತಿನಿಧಿಗಳಾದ ಸೋಮಸುಂದರ್, ನಿರ್ಮಲಾ ಡಯಾಸ್, ಪಠ್ಯೇತರ ಚಟುವಟಿಕೆಗಳ ಸಂಯೋಜಕರಾದ ಜಯಶ್ರೀ ಸುರೇಶ್ ಹಾಜರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ವಿಧ್ಯಾರ್ಥಿಗಳು ಬ್ಯಾಡ್ಜ್ ಪಡೆಯುವುದರ ಮೂಲಕ ಪ್ರಮಾಣವಚನವನ್ನು ಸ್ವೀಕರಿಸಿದರು. ತದನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಸಂಸ್ಥೆಯ ಶಿಕ್ಷಕಿ ಪದ್ಮಶ್ರೀ ಸ್ವಾಗತಿಸಿದರು. ಜಯಶ್ರೀ ಸುರೇಶ್ ವಂದಿಸಿದರು. ವಿದ್ಯಾರ್ಥಿಗಳಾದ ಕುಮಾರಿ ಅದಿತಿ ಮತ್ತು ಕುಮಾರಿ ಪದ್ಮಶ್ರೀ ಕಾರ್ಯಕ್ರಮವನ್ನು ನಿರ್ವಹಿಸಿದರು.

Exit mobile version