ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಟಾಟಾ ಏಸ್ ವಾಹನದಲ್ಲಿ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್ ಹಾಗೂ ಆಹಾರ ನಿರೀಕ್ಷಕ ವಿನಯ ಕುಮಾರ್ ಅವರ ತಂಡ ದಾಳಿ ನಡೆಸಿದೆ.
ಬೈಂದೂರಿನಿಂದ ಕುಂದಾಪುರ ಕಡೆಗೆ ಸಾಗಿಸುತ್ತಿದ್ದ ಅಂದಾಜು ನಾಲ್ಕು ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ವಾಹನವನ್ನು ಕಿರಿಮಂಜೇಶ್ವರ ಶಾಲೆಬಾಗಿಲು ಬಳಿ ಅಡ್ಡಗಟ್ಟಿ ವಶಪಡಿಸಿಕೊಂಡಿದ್ದಾರೆ. ವಾಹನ ಚಾಲಕ ಪರಾರಿಯಾಗಿದ್ದಾನೆ.
ಈ ಸಂದರ್ಭ ಗ್ರಾಮ ಲೆಕ್ಕಿಗ ಗಣೇಶ್ ಮೇಸ್ತ, ಪಿಡಿಓ ರಾಜೇಶ್, ಕಿರಿಮಂಜೇಶ್ವರ ಪಂಚಾಯತ್ ಉಪಾಧ್ಯಕ್ಷರಾದ ಶೇಖರ್ ಖಾರ್ವಿ ಹಾಜರಿದ್ದರು