Kundapra.com ಕುಂದಾಪ್ರ ಡಾಟ್ ಕಾಂ

ಕಾರಂತ ಥೀಮ್ ಪಾರ್ಕಿನಲ್ಲಿ ಮಾದರಿ ಸಾಹಿತ್ಯಿಕ, ಸಾಂಸ್ಕೃತಿಕ ಚಟುವಟಿಕೆ: ಪೂರ್ಣಿಮಾ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯುವ ಸಾಹಿತ್ಯಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಮಾದರಿಯಾಗಿದ್ದು, ಕಾರಂತರ ಚಿಂತನೆಗಳನ್ನು ಅವರ ಬದುಕಿನ ಚಿತ್ರಣವನ್ನು ಮುಂದಿನ ಪೀಳಿಗೆಗೆ ರವಾನಿಸುವ ಕಾರ್ಯ ಶ್ಲಾಘನೀಯ, ಕೋವಿಡ್ ಸಂದರ್ಭದಲ್ಲಿಯೂ ಆನ್ ಲೈನ್ ಮೂಲಕ ಕಾರ್ಯಕ್ರಮ ನಡೆಸಿ ಸಂಸ್ಥೆಗಳ ಕ್ರಿಯಾಶೀಲತೆಗೆ ಹೊಸ ಭಾಷ್ಯ ಬರೆದಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರು ಹೇಳಿದರು.

ಅವರು ಕೋಟದ ಕಾರಂತ ಥೀಮ್ ಪಾರ್ಕ್‌ನಲ್ಲಿ ಡಾ|| ಶಿವರಾಮ ಕಾರಂತ ಪ್ರತಿಷ್ಠಾನ(ರಿ) ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ನಡೆದ ತಿಂಗಳ ಕಾರ್ಯಕ್ರಮ ಯಕ್ಷಗಾನ ತಾಳಮದ್ದಳೆ ವಾಲಿ ಮೋಕ್ಷ ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡುತ್ತಿದ್ದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ್ ಆಚಾರ್ಯ, ಭಾಗವತರಾದ ಉದಯ ಹೊಸಾಳ, ಯಕ್ಷಗಾನ ಸಂಘಟಕ ಪ್ರಸಾದ್ ಬಿಲ್ಲವ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ ಪ್ರಸ್ತಾಪಿಸಿ, ಟ್ರಸಿ ಸತೀಶ್ ವಡ್ಡರ್ಸೆ ನಿರೂಪಿಸಿದರು.

Exit mobile version