ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಭಾರತೀಯ ಜನಸಂಘದ ಸಂಸ್ಥಾಪಕ ಹಾಗೂ ಪ್ರಥಮ ಅಧ್ಯಕ್ಷ ಡಾ| ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ್ ದಿವಸ್ ಬೈಂದೂರು ಮಂಡಲ ಬಿಜೆಪಿ ಕಛೇರಿಯಲ್ಲಿ ಗುರುವಾರ ಶ್ಯಾಮ ಪ್ರಸಾದ್ ಮುಖರ್ಜಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಆಚರಿಸಲಾಯಿತು.
ಶಾಸಕರಾದ ಬಿ. ಎಮ್. ಸುಕುಮಾರ್ ಶೆಟ್ಟಿ ಅವರು ಪುಷ್ಪಾರ್ಚನೆ ಮಾಡಿದರು. ಸಣ್ಣ ಕೈಗಾರಿಕಾ ನಿಗಮದ ಉಪಾಧ್ಯಕ್ಷರಾದ ದತ್ತಾತ್ರಿ, ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಆನಂದ್ ಖಾರ್ವಿ, ಮಂಡಲ ಪ್ರಧಾನ ಕಾರ್ಯದರ್ಶಿಯವರಾದ ಪ್ರಿಯದರ್ಶಿನಿ ದೇವಾಡಿಗ ಹಾಗೂ ಪ್ರಕಾಶ್ ಪೂಜಾರಿ ಜೆಡ್ಡು, ಜನಪ್ರತಿನಿಧಿಗಳು, ಪ್ರಮುಖರು ಉಪಸ್ಥಿತರಿದ್ದರು.