Kundapra.com ಕುಂದಾಪ್ರ ಡಾಟ್ ಕಾಂ

ಉಳ್ಳೂರು – 74 ಬಿಜೆಪಿ ಶಕ್ತಿಕೇಂದ್ರದಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ:
ಭಾರತೀಯ ಜನಸಂಘದ ಸಂಸ್ಥಾಪಕ ಹಾಗೂ ಪ್ರಥಮ ಅಧ್ಯಕ್ಷ ಡಾ| ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ್ ದಿವಸ್ ಉಳ್ಳೂರಿನ ಬಿಜೆಪಿ ಶಕ್ತಿ ಕೇಂದ್ರ ಕಛೇರಿಯಲ್ಲಿ ಆಚರಿಸಲಾಯಿತು.

ಡಾ| ಶ್ಯಾಮಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು. ಡಾ| ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನಾದರ್ಶ, ಹೋರಾಟಗಳು ಮತ್ತು ಬಲಿದಾನದ ಕುರಿತು ಉಡುಪಿ ಜಿಲ್ಲಾ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಸ್ಟ ಸಂಚಾಲಕ ಚಿಟ್ಟೆ ರಾಜಗೋಪಾಲ ಹೆಗ್ಡೆ ಮಾತನಾಡಿದರು.

ಈ ಸಂದರ್ಭದಲ್ಲಿ ಜಿ.ಪ. ಮಾಜಿ ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ಗ್ರಾ.ಪ.ಅಧ್ಯಕ್ಷ ರಾಜೇಶ್ ಹೆಬ್ಬಾರ್,ಶಕ್ತಿ ಕೇಂದ್ರ ಅಧ್ಯಕ್ಷ ಜಯರಾಮ ಶೆಟ್ಟಿ, ಮಾಜಿ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಟೈಲರ್ ರಾಮಣ್ಣ, ಶಿವಶಂಕರ, ಶ್ರೀಕಾಂತ್ ನಾಯಕ್ ಹಾಗೂ ಪಕ್ಷದ ಅಭಿಮಾನಿಗಳು ಉಪಸ್ಥಿತರಿದ್ದರು.

Exit mobile version