Kundapra.com ಕುಂದಾಪ್ರ ಡಾಟ್ ಕಾಂ

ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಉದ್ಯಮಿ ಯು. ಬಿ. ಶೆಟ್ಟಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಉದ್ಯಮಿ, ಯು.ಬಿ.ಎಸ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಯು. ಬಿ. ಶೆಟ್ಟಿ ಅವರು ಮಂಗಳವಾರ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಗರಡಿಯ ಜೀರ್ಣೋದ್ಧಾರದ ಸಂದರ್ಭ ಉದಾರ ದೇಣಿಗೆ ನೀಡಿದ ಯು. ಬಿ. ಶೆಟ್ಟಿ ಅವರನ್ನು ಆಡಳಿತ ಮಂಡಳಿ ವತಿಯಿಂದ ಗೌರವಿಸಲಾಯಿತು. ಆಡಳಿತ ಮಂಡಳಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ ಗೌರವಿಸಿದರು.

ಈ ಸಂದರ್ಭ ವಕೀಲರಾದ ರಂಜಿತ್ ಕುಮಾರ್ ಶೆಟ್ಟಿ, ಗರಡಿ ಅರ್ಚಕ ಕುಟುಂಬದ ಮಂಜುನಾಥ ಪೂಜಾರಿ ಮೇಲ್‌ಹಿತ್ಲು, ವಿವಿಧ ಸಮಿತಿಗಳ ಪ್ರಮುಖರಾದ ಗಣೇಶ್ ಎಲ್. ಪೂಜಾರಿ, ಶಿವರಾಮ ಪೂಜಾರಿ ಯಡ್ತರೆ, ರಘುರಾಮ ಪೂಜಾರಿ ಬಪ್ಪನಬೈಲು, ಪ್ರಕಾಶ ಮಾಕೋಡಿ, ದೊಟ್ಟಯ್ಯ ಪೂಜಾರಿ, ಅರ್ಚಕ ಗಣೇಶ್ ಪೂಜಾರಿ ಮೇಲ್‌ಹಿತ್ಲು, ಚಂದ್ರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Exit mobile version