Kundapra.com ಕುಂದಾಪ್ರ ಡಾಟ್ ಕಾಂ

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್‌ಗೆ ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ನಾರಾಯಣ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತೆಕ್ಕಟೆ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್‌ಗೆ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ ಅವರು ಭೇಟಿ ನೀಡಿದರು.

ಕಾರ್ಯಕ್ರಮದಲ್ಲಿ ಮಕ್ಕಳನ್ನುದ್ದೇಶಿಸಿ ಮಾತನಾಡಿ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರತೀ ಕ್ಷೇತ್ರದಲ್ಲೂ ಜ್ಞಾನ ವೃದ್ಧಿಯನ್ನು ಮಾಡಿಕೊಳ್ಳಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳಿಗೆ ಶಿಕ್ಷಕರೂ ಸಹ ಸರಿಯಾದ ಮಾರ್ಗದರ್ಶನ ನೀಡುತ್ತಿರಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ, ಶಾಲಾ ಮ್ಯಾನೇಜಿಂಗ್ ಟ್ರಸ್ಟಿಗಳಾದ ಸುಧಾಕರ ಶೆಟ್ಟಿ, ಡಾ. ಜಯಕರ ಶೆಟ್ಟಿ, ಡಾ. ಕುಸುಮಾಕರ ಶೆಟ್ಟಿ, ಕರುಣಾಕರ ಶೆಟ್ಟಿ, ಜಯರಾಜ್ ಹೆಗ್ಡೆ, ಉಪಸ್ಥಿತರಿದ್ದರು. ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾರವರು ಸ್ವಾಗತಿಸಿ ಕಾರ‍್ಯಕ್ರಮ ನಿರೂಪಿಸಿದರು.

Exit mobile version