Kundapra.com ಕುಂದಾಪ್ರ ಡಾಟ್ ಕಾಂ

ಡಾ. ಗೋವಿಂದ ಬಾಬು ಪೂಜಾರಿ ಅವರಿಗೆ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶ್ರೀ ಸಿದ್ಧಾರ್ಥ ಎಜುಕೇಷನ್ ಸೊಸೈಟಿ ಹಾಗೂ ಸಾಲುಮರದ ತಿಮ್ಮಕ್ಕ ಇಂಟರ್ ನ್ಯಾಷನಲ್ ಫೌಂಡೇಶನ್ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ 111ನೇ ಜನುಮದಿನದ ಸಂಭ್ರಮದ ಅಂಗವಾಗಿ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿ ಕಾರ್ಯಕ್ರಮದಲ್ಲಿ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ 2020ಯನ್ನು ಡಾ. ಗೋವಿಂದ ಬಾಬು ಪೂಜಾರಿ ಅವರಿಗೆ ಪ್ರದಾನಿಸಲಾಯಿತು.

ರಾಜ್ಯ ವಸತಿ ಸಚಿವ ವಿ. ಸೋಮಣ್ಣ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಶಾಸಕ ರೇಣುಕಾಚಾರ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಡಾ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಸ್ವಂತ ಪರಿಶ್ರಮದಿಂದಲೇ ಬದುಕು ಕಟ್ಟಿಕೊಂಡವರು. ಶೆಫ್ಟಾಕ್ ಪುಡ್ & ಹಾಸ್ಪಿಟಾಲಿಟಿ, ಪ್ರಗ್ಯ್ನಾ ಸಾಗರ್, ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಮೊದಲಾದ ಸಂಸ್ಥೆಯ ಮೂಲಕ ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಸೂರಿಲ್ಲದವರಿಗೆ ಮನೆ ನಿರ್ಮಿಸಿಕೊಟ್ಟು ಬಡಕುಟುಂಬಗಳಿಗೆ ನೆರಳಾಗಿದ್ದಾರೆ. ಹಲವು ವರ್ಷಗಳಿಂದ ಶೈಕ್ಷಣಿಕ, ಆರೋಗ್ಯ ಸಂಬಂಧಿ ನೆರವು, ಕರೋನಾ ಸಂದರ್ಭದಲ್ಲಿ ಸಾವಿರಾರು ಬಡ ಕುಟುಂಬಗಳಿಗೆಪುಡ್ ಕಿಟ್ ವಿತರಣೆ ಸೇರಿದಂತೆ ಹತ್ತಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಗೋವಿಂದ ಬಾಬು ಪೂಜಾರಿ ಅವರ ಉದ್ಯಮ ಕ್ಷೇತ್ರ, ಸಾಮಾಜಿಕ, ಸೇವಾ ಕ್ಷೇತ್ರಗಳ ಕಾರ್ಯವನ್ನು ಗುರುತಿಸಿ ಹಲವು ಪ್ರಶಸ್ತಿ ಸನ್ಮಾನಗಳು ಅರಸಿ ಬಂದಿವೆ.

Exit mobile version