Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯಲ್ಲಿ ಸತತ ಮಳೆ: ಜುಲೈ 1ರಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಉಡುಪಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಎರಡು ದಿನಗಳ ಕಾಲ ಹೆಚ್ಚಿನ ಅತಿಯಾಗುವುದರಿಂದ, ಮುಂಜಾಗೃತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ದಿನಾಂಕ: 01.07.2022 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ತಿಳಿಸಿದ್ದಾರೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/

ಇದಕ್ಕೂ ಮೊದಲು ಶಾಲಾ ಮುಖ್ಯಸ್ಥರಿಗೆ ರಜೆ ಘೋಷಿಸುವ ಅಧಿಕಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಲೂ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದರು. ಬಳಿಕ ಅಧಿಕೃತವಾಗಿ ಜುಲೈ 1ರಂದು ರಜೆ ಘೊಷಿಸಿದ್ದಾರೆ. ಆದರೆ ನಾಳೆ ಇರುವ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ನಿಗದಿಯಂತೆಯೇ ನಡೆಯುತ್ತವೆ ಎಂದು ತಿಳಿದುಬಂದಿದೆ.

https://youtu.be/7didS7sMWG4
Exit mobile version