Kundapra.com ಕುಂದಾಪ್ರ ಡಾಟ್ ಕಾಂ

ಭಾರಿ ಮಳೆ ಹಿನ್ನೆಲೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಣೆ

ಕುಂದಾಪ್ರ ಡಾಟ್ ಕಾಂ‌ ಸುದ್ದಿ.
ಉಡುಪಿ
: ಭಾರಿ ಮಳೆ ಮುಂದುವರಿದ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು (ಜು.05) ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ.

ಕರಾವಳಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ಅವರಿಸಿಕೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಜಿಲ್ಲಾಡಳಿತ ಪ್ರಾಥಮಿಕ, ಪ್ರೌಢಶಾಲೆ, ಪದವಿ ತರಗತಿಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

Exit mobile version