Kundapra.com ಕುಂದಾಪ್ರ ಡಾಟ್ ಕಾಂ

ನಾವುಂದ: ಸರಕಾರಿ ಬಸ್ಸಿಗೆ ಕಾರು ಡಿಕ್ಕಿ, ಮೂವರು ಆಸ್ಪತ್ರೆಗೆ ದಾಖಲು

ಕುಂದಾಪ್ರ ಡಾಟ್ ಕಾಂ‌ ಸುದ್ದಿ.
ಕುಂದಾಪುರ:
ಸರಕಾರಿ ಬಸ್ಸಿಗೆ ಸ್ವಿಫ್ಟ್ ಕಾರೊಂದು ಹಿಂಬದಿಯಿಂದ ಗುದ್ದಿದ ಪರಿಣಾಮ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಸೇರಿದಂತೆ ಮೂವರಿಗೆ ಗಂಭೀರ ಗಾಯವಾದ ಘಟನೆ ನಾವುಂದ ಬಸ್ ನಿಲ್ದಾಣದ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ.

ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ತೆರಳುತ್ತಿದ್ದ ಬಸ್ಸು, ನಾವುಂದ ಬಸ್ ನಿಲ್ದಾಣ ಹಾಗೂ ಬ್ಯಾರಿಕೇಡ್ ಬಳಿ ಬಸ್ ನಿಧಾನಗೊಂಡಾಗ ಹಿಂಬಂದಿಯಿಂದ ಬಂದ ಕಾರು ಬಸ್ಸಿಗೆ ಡಿಕ್ಕಿಯಾಗಿತ್ತು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ಚಲಾಯಿಸುತ್ತಿದ್ದ ಚಾಲಕನಿಗೆ ಗಂಭೀರ ಗಾಯವಾಗಿದೆ. ಆತನ ಕುಟುಂಬದ ಈರ್ವರೂ ಮಹಿಳೆಯರಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಸ್ಥಳೀಯರ ಸಹಕಾರದಿಂದ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Exit mobile version