ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜು.5: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ಜುಲೈ 6ರ ಬುಧವಾರವೂ ಕೂಡ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಂಗಳವಾರದಂದು ಜಿಲ್ಲೆಯಲ್ಲಿ ನಿರಂತರವಾಗಿ ಎಡೆಬಿಡದೆ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆ, ಕಾಲೇಜುಗಳಿಗೆ ರಜೆ ಘೊಷಣೆ ಮಾಡಲಾಗಿದೆ. ನಿರಂತರ ಮಳೆಯ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಇಂದು ಬೆಳಿಗ್ಗೆಯೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಲಾಗಿತ್ತು.