ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜು.07: ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ8 ಹಾಗೂ 9ರಂದು ಎಲ್ಲಾ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಕಳೆದ 48 ಗಂಟೆಯ ಅವಧಿಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಅಲ್ಲದೇ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.