Kundapra.com ಕುಂದಾಪ್ರ ಡಾಟ್ ಕಾಂ

ಅ.2: ಕೋಟದಲ್ಲಿ ಸಂಸದೀಯ ಪ್ರಜಾಪ್ರಭತ್ವ – ವರ್ತಮಾನ ಪ್ರಸ್ತುತತೆ ಉಪನ್ಯಾನ

ಕೋಟ: ಕಳೆದ 10 ವರ್ಷಗಳಿಂದ ಗಾಂಧಿ ಜಯಂತಿಯನ್ನು ಆಚರಿಸಿಕೊಂಡು ಬರುತ್ತಿರುವ ಬಹುಮಖಿ ಸಾಲಿಗ್ರಾಮ ಸಂಸ್ಥೆಯ ಈ ಬಾರಿ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಕಡೂರು ಕ್ಷೇತ್ರದ ಶಾಸಕ ವೈ.ಎಸ್.ವಿ.ದತ್ತಾ ಅವರನ್ನು ಮುಖ್ಯ ಭಾಷಣಕಾರರಾಗಿ ಆಗಮಿಸುತ್ತಿದ್ದು, ಸಂಸದೀಯ ಪ್ರಜಾಪ್ರಭತ್ವ – ವರ್ತಮಾನ ಪ್ರಸ್ತುತತೆ ಎಂಬ ವಿಷಯವಾಗಿ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ಡಾ. ಕೃಷ್ಣ ಕಾಂಚನ್ ತಿಳಿಸಿದರು.

ಅವರು ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಪ್ಠಿಯಲ್ಲಿ ಮಾತನಾಡುತ್ತಾ, ಪ್ರತಿ ವರ್ಷವು ಗಣ್ಯರನ್ನು ಆಮಂತ್ರಿಸಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸುವ ಪರಿಪಾಠ ನಮ್ಮ ಸಂಸ್ಥೆಯದ್ದಾಗಿದೆ. ಅಲ್ಲದೇ ಸಭಾ ಕಾರ್ಯಕ್ರಮದ ಬಳಿಕ ಯಕ್ಷಗಾನ, ಯಕ್ಷಗಾನ ತಾಳ ಮದ್ದಳೆ ಕಾರ್ಯಕ್ರಮವನ್ನು ೧೦ ವರ್ಷಗಳಿಂದ ಆಯೋಜಿಸುತ್ತಾ ಬಂದಿದ್ದೇವೆ. ಈ ಬಾರಿಯ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಕೋಟ ಶ್ರೀ ಅಮೃತೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಆನಂದ ಸಿ.ಕುಂದರ್ ಮೊದಲಾವರು ಉಪಸ್ಥಿತರಿರಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸಾಗರದ ಸಾಕೇತ ಕಲಾವಿದರಿಂದ ರಾಮ ನಿರ್ಯಾಣ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೋಟ ಸಿಎ ಬ್ಯಾಂಕ್ ನಿರ್ದೇಶಕ ರಾಜೇಶ್ ಉಪಾಧ್ಯ ಮತ್ತು ಡಾ.ಸೂರ್ಯನಾರಾಯಣ ಉಪಾಧ್ಯ ಉಪಸ್ಥಿತರಿದ್ದರು.

Exit mobile version