Site icon Kundapra.com ಕುಂದಾಪ್ರ ಡಾಟ್ ಕಾಂ

ರತ್ತುಬಾಯಿ ಜನತಾ ಪ್ರೌಢಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ದೇಣಿಗೆ ಹಸ್ತಾಂತರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ರತ್ತುಬಾಯಿ ಜನತಾ ಪ್ರೌಢಶಾಲೆಯ ಅಭಿವೃದ್ಧಿ ಕಾರ್ಯಗಳಿಗಾಗಿ ಉದ್ಯಮಿ, ಶ್ರೀ ರಾಮ ವಿವಿದೋದ್ದೇಶ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟೀ ರಾಮಕೃಷ್ಣ ಶೇರುಗಾರ್ ಬಿಜೂರು ಅವರು ರೂ.1,00,000 ಹಣವನ್ನು ಶ್ರೀ ವಿ.ವಿ.ವಿ ಆಡಳಿತ ಮಂಡಳಿ ಹೆಮ್ಮಾಡಿ ಇದರ ಉಪಾಧ್ಯಕ್ಷರಾದ ರಾಜು ಪೂಜಾರಿ ಇವರಿಗೆ ಹಸ್ತಾಂತರಿಸಿದರು,

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿರ್ದೇಶಕರಾದ ರಘುರಾಮ್ ಪೂಜಾರಿ ನಿವೃತ್ತ ಮುಖ್ಯ ಶಿಕ್ಷಕರಾದ ವಿಶ್ವೇಶ್ವರ ಅಡಿಗ, ಟಿ.ಆರ್. ಹುದಾರ್ ಹಾಗೂ ಜೆಸಿ ಬೈಂದೂರು ಸಿಟಿ ಅಧ್ಯಕ್ಷರಾದ ಸವಿತಾ ದಿನೇಶ್, ಉಪನ್ಯಾಸಕರಾದ ಮಣಿಕಂಠ ದೇವಾಡಿಗ, ಗಣೇಶ್ ಪೂಜಾರಿ, ಉಪಪ್ರಾಂಶುಪಾಲರಾದ ಜಯಶೀಲಕುಮಾರ್ ಹಾಗೂ ಮುಖ್ಯ ಶಿಕ್ಷಕರಾದ ಮಂಜು ಕಾಳವಾರ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ಆನಂದ ಮದ್ದೊಡಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು, ಶಿಕ್ಷಕಿ ಚೈತ್ರ ವಂದಿಸಿದರು, ದೈಹಿಕ ಶಿಕ್ಷಕರಾದ ಗುರುರಾಜ ಕಾರ್ಯಕ್ರಮ ನಿರ್ವಹಿಸಿದರು.

Exit mobile version