Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಶಿಕ್ಷ ಪ್ರಭ ಅಕಾಡೆಮಿ: ಸಿಎ ಪರೀಕ್ಷೆ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸಿ.ಎ ಅಂತಿಮ ಹಂತದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಕುಂದಾಪುರದ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಇದರ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಕುಂದೇಶ್ವರ ರಸ್ತೆಯಲ್ಲಿನ ಸಂಸ್ಥೆಯ ಕಛೇರಿಯಲ್ಲಿ ನಡೆಯಿತು.

ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮೇ 2022 ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಸಂಸ್ಥೆಯ ವಿದ್ಯಾರ್ಥಿಗಳಾದ ಸಿಎ ಪ್ರಕಾಶ್ ಶೆಟ್ಟಿ ಮತ್ತು ವಿನಾರ್ಡ್ ಅವರನ್ನು ಅಭಿನಂದಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಿಎ ಪ್ರಕಾಶ್ ಶೆಟ್ಟಿ ಕಠಿಣ ಪರಿಶ್ರಮ, ಗುರುಗಳ ಮಾರ್ಗದರ್ಶನ, ಸಾಮಾಜಿಕ ಜಾಲತಾಣಗಳಿಂದ ದೂರವಿದ್ದರೆ ಸಿಎ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪೂರ್ಣಗೊಳಿಸಬಹುದು ಎಂದರು.

ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್ ಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿ ಅವರು ಸಾಧಕರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಪ್ರಭ ಅಕಾಡೆಮಿಯ ಸಿಎ/ಸಿಎಸ್ ಕೋರ್ಸುಗಳ ವಿವಿಧ ಹಂತದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಂಸ್ಥೆಯ ಅಂಕಿತ ವಿ ಶೆಟ್ಟಿ ಸ್ವಾಗತಿಸಿ ನಿರ್ವಹಿಸಿದರು.

Exit mobile version