Site icon Kundapra.com ಕುಂದಾಪ್ರ ಡಾಟ್ ಕಾಂ

ಸರಕಾರಿ ಕಛೇರಿಗಳಲ್ಲಿ ಪೊಟೋ-ವಿಡಿಯೋ ಚಿತ್ರೀಕರಣ ನಿಷೇಧ ಆದೇಶ ಹಿಂಪಡೆದ ರಾಜ್ಯ ಸರಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು,ಜು.16:
ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಅವಧಿಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಕ್ಲಿಕ್ಕಿಸುವುದು ಅಥವಾ ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಿ ಸರಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆದಿದೆ.

ರಾಜ್ಯ ಸರಕಾರದ ಈ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು, ಸರಕಾರ ಜುಲೈ 15ರ ರಾತ್ರಿಯೇ ಪೋಟೋ ಕ್ಲಿಕ್ಕಿಸುವುದು ಹಾಗೂ ವಿಡಿಯೋ ಚಿತ್ರಿಕರಣ ನಿಷೇಧದ ಆದೇಶವನ್ನು ಹಿಂಪಡೆದಿದೆ. ಈ ವಿಚಾರದಲ್ಲಿ ಇನ್ನು ಯಥಾಸ್ಥಿತಿ ಮುಂದುವರಿಯಲಿದೆ.

ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಕೆಲವು ಸಾರ್ವಜನಿಕರು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವುದರ ಜೊತೆಯಲ್ಲಿ ಕರ್ತವ್ಯದ ಅವಧಿಯಲ್ಲಿ ಸರ್ಕಾರಿ ಕಚೇರಿಯ ಒಳಗಡೆ ಫೊಟೋ ಹಾಗೂ ವಿಡಿಯೋಗಳನ್ನು ಶೂಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಇದು ಸರ್ಕಾರಿ ಸಿಬ್ಬಂದಿ ಇನ್ನೂ ಮುಖ್ಯವಾಗಿ ಮಹಿಳಾ ಸಿಬ್ಬಂದಿಗೆ ಇರಿಸು ಮುರಿಸು ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಅವಧಿಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಕ್ಲಿಕ್ಕಿಸುವುದು ಅಥವಾ ವಿಡಿಯೋ ಚಿತ್ರೀಕರಣ ಮಾಡುವುದಕ್ಕೆ ನಿಷೇಧಿಸುವ ಬಗ್ಗೆ ಜುಲೈ 15ರಂದು ಆದೇಶ ಹೊರಡಿಸಲಾಗಿತ್ತು. ರಾಜ್ಯ ಸರಕಾರಿ ನೌಕರರ ಸಂಘದಿಂದ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿತ್ತು.

Exit mobile version