ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರೆಡ ಕ್ರಾಸ್ ಘಟಕದ ವತಿಯಿಂದ “ಯಶಸ್ಸಿನಲ್ಲಿ ಗುರುವಿನ ಪಾತ್ರ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಂಬೈಯ ಇಸ್ಕಾನ್ ಸಂಸ್ಥೆಯ ಲೋಕಭವನ ಮಾತಾಜಿ ಆಗಮಿಸಿ ವ್ಯಕ್ತಿಯ ಜೀವನದಲ್ಲಿ ಒಬ್ಬ ಗುರುವಿನ ಪಾತ್ರ ಯಾವ ರೀತಿಯಲ್ಲಿ ಬಹುಮುಖ್ಯ ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ ಉಪಸ್ಥಿತರಿದ್ದರು.
ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಪ್ರೊ.ಸತ್ಯನಾರಾಯಣ ಸ್ವಾಗತಿಸಿದರು.ಕಾಲೇಜಿನ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಾಕಾರಿಣಿ ವಿದ್ಯಾರಾಣಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಈ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು.