ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಮ್ಮೊಳಗಿನ ಶಕ್ತಿಯನ್ನು ಅರಿಯುವ ತನಕ ಸಾಧನೆ ಸಾಧ್ಯವಾಗುವುದಿಲ್ಲ. ನಮ್ಮ ಶಕ್ತಿ ಅರಿತರೆ ನಮ್ಮ ಗುರಿಯನ್ನು ತಲುಪಬಹುದು ಎಂದು ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಸಚಿತ ನಂದಗೋಪಾಲ್ ಹೇಳಿದರು.
ಅವರು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಐಚ್ಛಿಕ ಭಾಷೆ ಇಂಗ್ಲಿಷ್, ಪತ್ರಿಕೋದ್ಯಮ, ಮನಶಾಸ್ತ್ರ ವಿಭಾಗಗಳು ಸೇರಿ ಆಯೋಜಿಸಿದ್ದ ‘ಸ್ವಯಂ ಪ್ರತಿಫಲನ’ ಎಂಬ ಕಾರ್ಯಗಾರದಲ್ಲಿ ಮಾತನಾಡಿ ಜೀವನದಲ್ಲಿ ಅನೇಕ ಬಾರಿ ಸೋಲು ಗೆಲುವು ಎಲ್ಲವನ್ನು ಎದುರಿಸುತ್ತೇವೆ. ಆದರೆ ಹೇಗೆ ನಿಭಾಯಿಸಬೇಕು ಎಂದು ಮೊದಲು ಅರಿತಿರಬೇಕು ಇಲ್ಲವಾದಲ್ಲಿ ಬದುಕನ್ನು ಗೆಲುವಿನ ಹಂತಕ್ಕೆ ಸಾಗಿಸುವುದು ಕಷ್ಟವಾಗಲಿದೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ. ನಾರಾಯಣ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಪ್ರೊ. ಮೀನಾಕ್ಷಿ ಎನ್.ಎಸ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸುಮಲತಾ ನಾಯ್ಕ್ , ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ರಾಜೇಶ್ವರಿ ಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿ ಭಾವನ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಯಜುಷಾ ಕಾರ್ಯಕ್ರಮ ನಿರ್ವಹಿಸಿ, ಫಾತಿಮಾ ಅನಾಜ್ ಅತಿಥಿಗಳ ಪರಿಚಯಿಸಿ ನೆರವೇರಿಸಿ, ಲಮೀಸ್ ವಂದಸಿದರು.