Kundapra.com ಕುಂದಾಪ್ರ ಡಾಟ್ ಕಾಂ

ಚಲಿಸುತ್ತಿದ್ದ ರಿಕ್ಷಾದ ಮೇಲೆ ಮುರಿದು ಬಿದ್ದ ವಿದ್ಯುತ್ ಕಂಬ. ಚಾಲಕನಿಗೆ ಗಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಚಲಿಸುತ್ತಿದ್ದ ರಿಕ್ಷಾದ ಮೇಲೆ ಇಲೆಕ್ಟ್ರಿಕ್ ಕಂಬ ಮುರಿದು ಬಿದ್ದು ರಿಕ್ಷಾ ಚಾಲಕ ಗಾಯಗೊಂಡ ಘಟನೆ ತಾಲೂಕಿನ ಕಳವಾಡಿಯಲ್ಲಿ ನಡೆದಿದೆ. ಶಿರೂರು ಮೈದಿನಪುರದ ಹೊಸಮನೆ ನಿವಾಸಿ ಸದಾಶಿವ (45) ಗಾಯಗೊಂಡ ಚಾಲಕ.

ಬೈಂದೂರು ಕೊಲ್ಲೂರು ರಾ.ಹೆ- 766ಸಿ‌ ಕಳವಾಡಿ ಎಂಬಲ್ಲಿ ತೆಂಗಿನ ಮರವೊಂದು ವಿದ್ಯುತ್ ತಂತಿಯ ಮೇಲೆ ಮುರಿದು ಬಿದ್ದ ಪರಿಣಾಮ ವಿದ್ಯುತ್ ಕಂಬವೂ ಮುರಿದು ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದಿದೆ.

ಆಟೋ‌ ರಿಕ್ಷಾ ಶಿರೂರಿನಿಂದ ಪ್ರಯಾಣಿಕರನ್ನು ಪಿಕ್‌ಅಪ್ ಮಾಡುವ ಸಲುವಾಗಿ ತಗ್ಗರ್ಸೆಗೆ ತೆರಳುತ್ತಿತ್ತು ಹಾಗಾಗಿ ಚಾಲಕ ಮಾತ್ರವೇ ಇದ್ದ ಎನ್ನಲಾಗಿದೆ. ಘಟನೆಯಲ್ಲಿ ರಿಕ್ಷಾ ಚಾಲಕನ ಬೆನ್ನು ಹಾಗೂ ಕೈಗಳಿಗೆ ಗಂಭೀರ ಗಾಯಗಳಾಗಿದ್ದು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಮೆಸ್ಕಾಂ ಸಿಬ್ಬಂದಿ ವಿದ್ಯುತ್ ಕಂಬವನ್ನು ತೆರವುಗೊಳಿಸಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version