Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಉಚಿತ ಹೊಲಿಗೆ ತರಬೇತಿ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ರೋಟರಿ ಜಿಲ್ಲೆ 31 82ರ ಜಿಲ್ಲಾ ಗವರ್ನರ್ ರೊಟೇರಿಯನ್ ಡಾ. ಜಯಗೌರಿ ಹಾದಿಗಲ್ ರವರ ಮಹತ್ವಕಾಂಕ್ಷೆಯ ಜಿಲ್ಲಾ ಕಾರ್ಯಕ್ರಮ ಮಹಿಳಾ ಸಬಲೀಕರಣದ ಭಾಗವಾಗಿ ಸಮಾಜದ ಆರ್ಥಿಕವಾಗಿ ಹಿಂದುಳಿದ ಆಯ್ದ ಮಹಿಳೆಯರಿಗೆ ಸ್ವ ಉದ್ಯೋಗ ಮಾಡುವಲ್ಲಿ ತರಬೇತುಗೊಳಿಸಲು ಆಯೋಜಿತವಾದ ಮೂರು ತಿಂಗಳ ಕಾಲಾವಧಿಯ ಉಚಿತ ಹೊಲಿಗೆ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ರಥಬೀದಿ ಗಂಗೊಳ್ಳಿಯಲ್ಲಿ ನೆರವೇರಿತು.

ವಲಯ ಒಂದರ ಅಸಿಸ್ಟೆಂಟ್ ಗವರ್ನರ್ ಡಾ. ಉಮೇಶ್ ಪುತ್ರನ್ ಶಿಬಿರವನ್ನು ಉದ್ಘಾಟಿಸಿದರು. ರೋಟರಿ ಕ್ಲಬ್ ಅಧ್ಯಕ್ಷೆ ಸುಗುಣ ಆರ್ ಕೆ ಅಧ್ಯಕ್ಷತೆ ವಹಿಸಿದ್ದರು. ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಚೇರ್ಮನ್ ಉಮೇಶ್ ಎಲ್ ಮೇಸ್ತ ಮತ್ತು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ರತ್ನಾಕರ ಖಾರ್ವಿ ಶುಭ ಹಾರೈಸಿದರು. ರೋಟರಿ ಕ್ಲಬ್’ನ ಸದಸ್ಯರು ಮತ್ತು ಎಲ್ಲಾ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರೋಟರಿ ಕ್ಲಬ್ ಕಾರ್ಯದರ್ಶಿ ಚಂದ್ರಕಲಾ ತಾಂಡೇಲ ಕಾರ್ಯಕ್ರಮವನ್ನು ನಿರ್ವಹಿಸಿದರು ಫಿಲೋಮಿನ ಫೆರ್ನಾಂಡಿಸ್ ವಂದಿಸಿದರು.

Exit mobile version