ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಸಿಎ ಸಿಎಸ್ ಪ್ರೊಫೆಷನಲ್ ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆ ಶಿಕ್ಷಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಂಸ್ಥೆಯ ವಿದ್ಯಾರ್ಥಿಗಳು ಮೇ ಮತ್ತು ಜುಲೈ 2022ರಲ್ಲಿ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸಿದ ಸಿ ಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ಉತ್ತಮ ಸಾಧನೆಗೈದಿದ್ದಾರೆ.
ಸಂಸ್ಥೆಯ ವಿದ್ಯಾರ್ಥಿಗಳಾದ ಕೃತಿಕ್ ಶೆಟ್ಟಿ (163), ಶ್ರವಣ್ ಕಾಮತ್ (161), ಅಜಯ್ (147), ಮಹೇಶ (138), ದೇವಿಕ ಎನ್ (132), ರೋಹಿತ್ ಆಚಾರ್ಯ (130), ಅಂಜಲಿ (128) ಅಂಕಗಳಿಸುವುದರೊಂದಿಗೆ ಸಿ ಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ಪೂರ್ಣಗೊಳಿಸಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಜ್ಯೋತಿ ಎನ್ (205), ವರುಣ್ ಆಚಾರ್ಯ (201) ಸಿ.ಎಸ್ ಎಕ್ಸಿಕ್ಯೂಟಿವ್ ಪರೀಕ್ಷೆಯ ಪ್ರಥಮ ಗ್ರೂಪ್ ಮೊದಲ ಪ್ರಯತ್ನದಲ್ಲೇ ತೇರ್ಗಡೆ ಹೊಂದಿದ್ದಾರೆ.
ಸಂಸ್ಥೆಯ ವಿದ್ಯಾರ್ಥಿಗಳು ಈಗಾಗಲೇ ಅಖಿಲ ಭಾರತ ಮಟ್ಟದಲ್ಲಿ ಸಿಎ ಸಿಎಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದು ಪ್ರೊಫೆಷನಲ್ ಕೋರ್ಸ್ಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತ ಬಂದಿರುವ ಶಿಕ್ಷ ಪ್ರಭ ಸಂಸ್ಥೆಯ ಸಾಧನೆಗೆ ಉತ್ತಮ ಬೋಧಕ ಸಿಬ್ಬಂದಿಗಳು ಸಂಸ್ಥೆಯ ಆಧುನಿಕ ಶಿಕ್ಷಣ ಪದ್ಧತಿಯ ಜೊತೆಗೆ ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಕಾರಣ ಎಂದು ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್ ಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.