Kundapra.com ಕುಂದಾಪ್ರ ಡಾಟ್ ಕಾಂ

ಗರ್ಭದಿಂದ ಗೋರಿಯ ತನಕ ಕಾನೂನು ಎಲ್ಲರಿಗೂ ಮುಖ್ಯ: ನ್ಯಾಯಾಧೀಶೆ ಶರ್ಮಿಳಾ ಎಸ್.

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಗರ್ಭದಿಂದ ಗೋರಿಯ ತನಕ ಕಾನೂನು ಎಲ್ಲರಿಗೂ ಮುಖ್ಯವಾಗಿದೆ. ಮಕ್ಕಳಿಗೂ ಸಂವಿಧಾನಾತ್ಮಕವಾಗಿ ಹಲವು ಹಕ್ಕುಗಳನ್ನು ನೀಡಲಾಗಿದ್ದು ಅದರ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಶರ್ಮಿಳಾ ಎಸ್. ಅವರು ಹೇಳಿದರು.

ಅವರು ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ವಕೀಲರ ಸಂಘ, ಇಂಡಿಯನ್ ಸೀನಿಯರ್ ಚೆಂಬರ್ಸ್ ಬೈಂದೂರು, ರತ್ತೂಬಾಯಿ ಜನತಾ ಪ್ರೌಢಶಾಲೆ ಸಹಯೋಗದೊಂದಿಗೆ ರತ್ತೂಬಾಯಿ ಜನತಾ ಪ್ರೌಢಶಾಲೆ ಆಯೋಜಿಸಲಾದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ 3ಲಕ್ಷಕ್ಕಿಂತ ಕಡಿಮೆ ವಾರ್ಷಿಕ ಆದಾಯ ಇರುವರಿಗೆ ಅಗತ್ಯವಿದ್ದಲ್ಲಿ ವಕೀಲರ ಮೂಲಕ ಉಚಿತವಾಗಿ ಅರಿವು ಮತ್ತು ನೆರವು ನೀಡುವ ವ್ಯವಸ್ಥೆ, ಲೋಕ್ ಅದಾಲತ್ ಮೂಲಕ ರಾಜಿ ಸಂಧಾನದ ಮಾಡಿ ಪ್ರಕರಣ ಇತ್ಯರ್ಥಗೊಳಿಸುವ ವ್ಯವಸ್ಥೆ ನ್ಯಾಯಾಂಗದಲ್ಲಿದ್ದು ಅಗತ್ಯವುಳ್ಳವರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದರು.

ಶಾಲಾ ಮುಖ್ಯೋಪಾಧ್ಯಾಯರಾದ ಆನಂದ ಮದ್ದೋಡಿ ಸ್ವಾಗತಿಸಿದರು. ಶಿಕ್ಷಕ ಚಂದ್ರ ಕೆ. ದೇವಾಡಿಗ ವಂದಿಸಿದರು. ಶಿಕ್ಷಕ ಪ್ರಕಾಶ್ ಮಾಕೋಡಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು.

Exit mobile version