Site icon Kundapra.com ಕುಂದಾಪ್ರ ಡಾಟ್ ಕಾಂ

ಇಂಟರ್‌ಲಾಕ್ ಕಾಮಗಾರಿಗೆ ಗುದ್ದಲಿಪೂಜೆ

ಗಂಗೊಳ್ಳಿ: ಸರಕಾರ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದು, ಅನುದಾನಿತ ಶಾಲೆಗಳ ಅಭಿವೃದ್ಧಿಗೂ ಸಹಕಾರ ನೀಡುತ್ತಿದೆ. ಈಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿರುವ ಎಸ್.ವಿ.ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ದೃಷ್ಟಿಯಿಂದ ಶಾಲೆಯ ಪ್ರಾಂಗಣದಲ್ಲಿ ಇಂಟರ್‌ಲಾಕ್ ಅಳವಡಿಸಲು ಅನುದಾನ ನೀಡಲಾಗಿದೆ ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಮಂಜೂರಾಗಿರುವ ಸುಮಾರು 3.5ಲಕ್ಷ ರೂ. ವೆಚ್ಚದ ಇಂಟರ್‌ಲಾಕ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ, ಕಾರ್ಯದರ್ಶಿ ಎಚ್.ಗಣೇಶ ಕಾಮತ್, ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ರೇಷ್ಮಾ ಆರ್.ಖಾರ್ವಿ, ಉಪಾಧ್ಯಕ್ಷ ಮಹೇಶ್‌ರಾಜ್ ಪೂಜಾರಿ, ಶಾಲೆಯ ಪ್ರಾಂಶುಪಾಲ ಆರ್.ಎನ್.ರೇವಣ್‌ಕರ್, ಜಿಪಂ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ, ಜಿಪಂ ಇಂಜಿನಿಯರ್ ರಾಜ್‌ಕುಮಾರ್, ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಗ್ರಾಪಂ ಸದಸ್ಯರು, ಶಾಲೆಯ ಉಪನ್ಯಾಸಕರು, ಅಧ್ಯಾಪಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪುರೋಹಿತರಾದ ವೇದಮೂರ್ತಿ ಜಿ.ಅನಂತಕೃಷ್ಣ ಭಟ್ ಮತ್ತು ಜಿ.ವಿಠಲದಾಸ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಉಪನ್ಯಾಸಕ ಸುಜಯೀಂದ್ರ ಹಂದೆ ಕಾರ್ಯಕ್ರಮ ನಿರೂಪಿಸಿದರು.

Exit mobile version