Kundapra.com ಕುಂದಾಪ್ರ ಡಾಟ್ ಕಾಂ

ಶಾಲೆಯ ಕ್ರೀಡಾಂಗಣ ಅಭಿವೃದ್ಧಿಗೆ ಗುದ್ದಲಿಪೂಜೆ

ಗಂಗೊಳ್ಳಿ: ಗಂಗೊಳ್ಳಿ ಬೆಳೆಯುತ್ತಿರುವ ಮೀನುಗಾರಿಕಾ ಬಂದರು ಪ್ರದೇಶವಾಗಿದ್ದು, ಗಂಗೊಳ್ಳಿ ಬಂದರಿನ ಅಭಿವೃದ್ಧಿಗೆ, ಬ್ರೇಕ್ ವಾಟರ್ ಕಾಮಗಾರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಮಂಜೂರಾಗಿರುವ ೧೦೨ ಕೋಟಿ ರೂ. ವೆಚ್ಚದ ಕಾಮಗಾರಿಗೆ ಅತೀ ಶೀಘ್ರದಲ್ಲಿ ಶಿಲಾನ್ಯಾಸ ನೆರವೇರಿಸಲು ನಿರ್ಧರಿಸಲಾಗಿದ್ದು, ರಾಜ್ಯದ ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

ಅವರು ಗಂಗೊಳ್ಳಿ ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆಯ ಕ್ರೀಡಾಂಗಣ ಅಭಿವೃದ್ಧಿಗೆ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಸಂಸದರ ಪ್ರದೇಶಾಭಿವೃದ್ಧಿ ನಿಧಿ ಯೋಜನೆಯಡಿ ಮಂಜೂರಾಗಿರುವ ೫ ಲಕ್ಷ ರೂ. ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಗಂಗೊಳ್ಳಿಯ ಹಲವು ರಸ್ತೆಗಳ ಕಾಂಕ್ರೀಟಿಕರಣ ಕಾಮಗಾರಿ ನಡೆಯುತ್ತಿದ್ದು, ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಮುಂದೆ ಜಿಲ್ಲಾ ಪಂಚಾಯತ್ ಕ್ಷೇತ್ರವಾಗಿ ರೂಪುಗೊಳ್ಳಲಿರುವ ಗಂಗೊಳ್ಳಿಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಅವರು ಹೇಳಿದರು.
ಗಂಗೊಳ್ಳಿ ಚರ್ಚಿನ ಧರ್ಮಗುರು ರೆ.ಫಾ. ಅಲ್ಬರ್ಟ್ ಕ್ರಾಸ್ತಾ, ತಾಪಂ ಸದಸ್ಯೆ ಪೂರ್ಣಿಮಾ ಎಂ.ಖಾರ್ವಿ, ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ರೇಷ್ಮಾ ಆರ್.ಖಾರ್ವಿ, ಉಪಾಧ್ಯಕ್ಷ ಮಹೇಶ್‌ರಾಜ್ ಪೂಜಾರಿ, ಶಾಲೆಯ ಮುಖ್ಯೋಪಾಧ್ಯಾಯಿನಿ ವೈಲೆಟ್ ತಾವ್ರೋ, ಜಿಪಂ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ, ಗಂಗೊಳ್ಳಿ ಕ್ಲಸ್ಟರ್‌ನ ಸಿಆರ್‌ಪಿ ತಿಲೋತ್ತಮ, ಜಿಪಂ ಇಂಜಿನಿಯರ್ ರಾಜ್‌ಕುಮಾರ್, ಶಾಲೆಯ ಶಿಕ್ಷಕ-ರಕ್ಷಕ ಸಮಿತಿಯ ಅಧ್ಯಕ್ಷ ನಾಗಪ್ಪಯ್ಯ ಪಟೇಲ್, ಹಳೆ ವಿದ್ಯಾರ್ಥಿ ಸಂಘದ ನಾಗರಾಜ ಖಾರ್ವಿ, ಮಹಮ್ಮದ್ ಹುಸೇನ್, ಗುತ್ತಿಗೆದಾರ ವಾಸುದೇವ ಶೇರುಗಾರ್, ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಗ್ರಾಪಂ ಸದಸ್ಯರು, ಶಾಲೆಯ ಅಧ್ಯಾಪಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version