Kundapra.com ಕುಂದಾಪ್ರ ಡಾಟ್ ಕಾಂ

ಮಹಾಸತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಕಾರ್ಯಕ್ಷೇತ್ರ ಹೊಂದಿರುವ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತಿವರ್ಷ ಉತ್ತಮವಾಗಿ ಕಾರ್ಯನಿರ್ವಹಿಸಿ ಅಧಿಕ ಲಾಭ ಗಳಿಸುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸಹಕಾರಿ ಸಂಘದ ಪಾಲುದಾರರಿಗೆ ಶೇ.10 ಡಿವಿಡೆಂಡ್ ನೀಡಲಾಗುವುದು ಎಂದು ಸಂಘದ ಅಧ್ಯಕ್ಷೆ ನೀಲಾವತಿ ಎಸ್.ಖಾರ್ವಿ ಹೇಳಿದರು.

ಅವರು ಇತ್ತೀಚಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಜರಗಿದ ಗಂಗೊಳ್ಳಿಯ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ 2014-15ನೇ ಸಾಲಿನ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಘದ ಉಪಾಧ್ಯಕ್ಷೆ ಸುಶೀಲಾ ಎ.ಖಾರ್ವಿ, ನಿರ್ದೇಶಕಿಯರಾದ ಶಾರದಾ ಎಸ್.ಖಾರ್ವಿ, ಸರಸ್ವತಿ ಎಲ್.ಖಾರ್ವಿ, ಶಾರದಾ ಆರ್.ಹೆಗ್ಡೆ, ಮಾಲತಿ ಜಿ.ಖಾರ್ವಿ, ಶೈಲಾ ಎಂ.ಖಾರ್ವಿ ಉಪಸ್ಥಿತರಿದ್ದರು. ಸಂಘದ ನಿರ್ದೇಶಕಿ ಜಯಂತಿ ಆರ್.ಖಾರ್ವಿ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಗಣಪತಿ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು. ನಿರ್ದೇಶಕಿ ಪಾರ್ವತಿ ಬಿ.ಖಾರ್ವಿ ವಂದಿಸಿದರು.

Exit mobile version