ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 108ನೇ ವಾರ್ಷಿಕ ಮಹಾಸಭೆಯಲ್ಲಿ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 2021-22 ಸಾಲಿನ ವಾರ್ಷಿಕ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ.
ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಏನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ಎಂ. ವಿನಾಯಕ ರಾವ್, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ ನಾಯಕ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಕ್ಷ್ಮೀ ನಾರಾಯಣ, ಕುಂದಾಪುರ ತಾಲೂಕು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಲಾವಣ್ಯ, ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ. ಹಾಗೂ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.