Site icon Kundapra.com ಕುಂದಾಪ್ರ ಡಾಟ್ ಕಾಂ

ಮೀನುಗಾರರಿಂದ ಶೃಂಗೇರಿ ಶ್ರೀಗಳ ಭೇಟಿ

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರಿಕೆಯ ಅಭಿವೃದ್ಧಿ ಹಾಗೂ ಸಮಸ್ತ ಮೀನುಗಾರರ ಶ್ರೇಯೋಭಿವೃದ್ಧಿಗಾಗಿ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಸದಸ್ಯರು ಶೃಂಗೇರಿಯಲ್ಲಿ ಶೃಂಗೇರಿಯ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಿಯವರನ್ನು ಮತ್ತು ಶ್ರೀ ವಿದುಶೇಖರ ಭಾರತೀ ತೀರ್ಥ ಶ್ರೀಗಳನ್ನು ಭೇಟಿ ಮಾಡಿ ಪಾದಪೂಜೆ ಸಲ್ಲಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಆಶೀರ್ವಚನ ಪಡೆದರು.

ಶ್ರೀಗಳ ಭೇಟಿಗೂ ಮುನ್ನ ಮೀನುಗಾರರು ಶೃಂಗೇರಿಯ ಶ್ರೀ ಶಾರದಾ ಮಾತೆಗೆ ವಿಶೇಷ ಪೂಜೆ ಪುನಸ್ಕಾರ ಸಲ್ಲಿಸಿದರು. ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಎಚ್.ಮಂಜು ಬಿಲ್ಲವ, ಗೌರವಾಧ್ಯಕ್ಷ ಕೋಡಿ ತಿಮ್ಮಪ್ಪ ಖಾರ್ವಿ, ಮಾಜಿ ಅಧ್ಯಕ್ಷ ಡಿ.ಚಂದ್ರ ಖಾರ್ವಿ ಹಾಗೂ ನಾಡದೋಣಿ ಮೀನುಗಾರರು ಶ್ರೀಗಳವರನ್ನು ಭೇಟಿ ಮಾಡಿ ಆಶೀರ್ವಚನ ಪಡೆದರು.

Exit mobile version