ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಅ.10: ಕಾಲುಸಂಕ ದಾಟುತ್ತಿದ್ದ ವೇಳೆ ಆಯತಪ್ಪಿ ಹಳ್ಳಕ್ಕೆ ಬಿದ್ದು ನೀರುಪಾಲಾದ 2ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ (7) ಮೃತದೇಹ 48 ಗಂಟೆ ಬಳಿಕ ಪತ್ತೆಯಾಗಿದೆ.
ಅಗಸ್ಟ್ 8ರ ಸೋಮವಾರ ಸಂಜೆ ಕಾಲ್ತೋಡು ಗ್ರಾಮದ ಬೀಜಮಕ್ಕಿ ಎಂಬಲ್ಲಿ ಈ ಘಟನೆ ನಡೆದಿದ್ದು ನಿರಂತರವಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಬುಧವಾರ ಸಂಜೆ ಆಕೆ ಮೃತದೇಹ ಕಾಲುಸಂಕದಿಂದ 400 ಮೀಟರ್ ದೂರದಲ್ಲಿ ಪತ್ತೆಯಾಗಿದೆ.
ಅಗ್ನಿಶಾಮಕ ದಳ ಸಿಬ್ಬಂದಿಗಳು, ಈಜುಪಟುಗಳಾದ ಮೀನುಗಾರ ನರೇಶ್ ಕೊಡೇರಿಯವರ ಮುಂದಾಳತ್ವದ 22 ಜನರ ತಂಡ, ಸಾರ್ವಜನಿಕರೂ ಸೇರಿ ನೂರಕ್ಕೂ ಅಧಿಕ ಮಂದಿ ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಕಾರ್ಯಾಚರಣೆಗೆ ಎರಡು ದೋಣಿಗಳನ್ನು ಬಳಿಸಿಕೊಳ್ಳಲಾಗುತ್ತಿದೆ.
ಈ ವೇಳೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು ಮಾರ್ಗದರ್ಶನದಲ್ಲಿ ಬಾಲಕಿ ಮೃತದೇಹ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು ಬೈಂದೂರು ತಹಶಿಲ್ದಾರ್ ಕಿರಣ್ ಗೌರಯ್ಯ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಉಡುಪಿ ಎಸ್ಪಿ ವಿಷ್ಣುವರ್ಧನ್ ಎನ್., ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ಭೇಟಿ ನೀಡಿದ್ದಾರೆ.
ಕಾಲ್ತೋಡು ಗ್ರಾಮದ ಮಕ್ಕಿಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ದಂಪತಿಯ ಇಬ್ಬರು ಮಕ್ಕಳಲ್ಲಿ ಮೊದಲನೇ ಪುತ್ರಿ ಸನ್ನಿಧಿ ನೀರು ಪಾಲಾಗಿ 48 ಗಂಟೆಯಾಗಿದ್ದು ಮನೆಮಂದಿ ಆಕ್ರಂಧನ ಮುಗಿಲುಮುಟ್ಟಿದೆ. ಒಂದೆಡೆ ಮಗಳ ಸಾವಿನ ನೋವು, ಮತ್ತೊಂದೆಡೆ ಇನ್ನೂ ಸಂಜೆತನಕ ಮೃತದೇಹ ಸಿಗದ ಕಾರಣ ಮನೆಮಂದಿ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಹಲವು ಬಾರಿ ಮನವಿ ಕೊಟ್ಟಿದ್ದೇವೆ. ಒಂದು ಕಾಲು ಸೇತುವೆ ಮಾಡಿಕೊಟ್ಟಿದ್ದರೆ ಮಗು ಬದುಕುತ್ತಿತ್ತು ಎಂದು ಸನ್ನಿಧಿ ಕುಟುಂಬಿಕರು ಕಣ್ಣೀರು ಹಾಕಿದ್ದಾರೆ.
ಇದನ್ನೂ ಓದಿ:
► ಬೋಳಂಬಳ್ಳಿ: ಕಾಲುಸಂಕ ದಾಟುತ್ತಿದ್ದ ವಿದ್ಯಾರ್ಥಿನಿ ನೀರುಪಾಲು, ಬಾಲಕಿಗಾಗಿ ತೀವ್ರ ಶೋಧ – https://kundapraa.com/?p=61296 .
► ಹಳ್ಳಕ್ಕೆ ಬಿದ್ದು ನಾಪತ್ತೆಯಾದ ಬಾಲಕಿಗಾಗಿ ಮುಂದುವರಿದ ಶೋಧ, ಮನೆಯಲ್ಲಿ ಆಕ್ರಂದನ – https://kundapraa.com/?p=61302 .
► ಒಂದು ದಿನ ಕಳೆದರೂ ಪತ್ತೆಯಾಗದ ಬಾಲಕಿ ಮೃತದೇಹ, ಮುಂದುವರಿದ ಶೋಧಕಾರ್ಯ – https://kundapraa.com/?p=61324
► ಪತ್ತೆಯಾಗದ ಬಾಲಕಿ ಮೃತದೇಹ. ಕುಟುಂಬಿಕರಿಗೆ ಸಾಂತ್ವಾನ ಹೇಳಿದ ಉಸ್ತುವಾರಿ ಸಚಿವ ಅಂಗಾರ https://kundapraa.com/?p=61388