ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನದ ಹಬ್ಬವನ್ನು ಆಚರಿಸಲಾಯಿತು.
ಬೈಂದೂರು ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಹಾಗೂ ಪದಾಧಿಕಾರಿಗಳಿಗೆ, ಬೈಂದೂರು ಆರಕ್ಷಕ ಠಾಣೆಯ ಸಿಬ್ಬಂದಿಗಳಿಗೆ,ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಹಾಗೂ ಪೌರ ಕಾರ್ಮಿಕರಿಗೆ ರಾಖಿ ಕಟ್ಟುದರ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಸುರೇಶ್, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಾಂತಿ ಖಾರ್ವಿ ಹಾಗೂ ದೀಪ ಶೆಟ್ಟಿ, ಮಹಿಳಾ ಮೋರ್ಚಾ ಉಪಾಧ್ಯಕ್ಷರ ಸರಸ್ವತಿ ನಾಯರ್ ಹಾಗೂ ಕಚೇರಿ ನಿರ್ವಾಹಕಿ ನಾಗಶ್ರೀ ಉಪಸ್ಥಿತರಿದ್ದರು.