ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಿತಿ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ ಗುರುವಾರ ನಡೆಯಿತು.
ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ ಅವರಿಗೆ ಕಾಂಗ್ರೆಸ್ ಮಹಿಳಾ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ ಅವರು ರಾಖಿ ಕಟ್ಟಿ ಶುಭಕೋರಿದರು.
ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಾನಕಿ ಮೊಗವೀರ ಸೇರಿದಂತೆ ಬೈಂದೂರು ಕಾಂಗ್ರೆಸ್ ಮಹಿಳಾ ಸಮಿತಿ ಪದಾಧಿಕಾರಿಗಳು ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಮುಖಂಡರು ಭಾಗವಹಿಸಿದ್ದರು.
ಬಳಿಕ ಬೈಂದೂರು ಪೊಲೀಸ್ ಠಾಣೆ ಸೇರಿದಂತೆ ಇನ್ನಿತರ ಕಛೇರಿಗೆ ತೆರಳಿ ಸಿಬ್ಬಂದಿಗಳಿಗೆ ರಾಖಿ ಕಟ್ಟಿ ರಕ್ಷಾ ಬಂಧನದ ಶುಭಕೋರಲಾಯಿತು.