Kundapra.com ಕುಂದಾಪ್ರ ಡಾಟ್ ಕಾಂ

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ – ಆಪರೇಟಿವ್ ಮಹಾಸಭೆ, ಶೇ.13 ಡಿವಿಡೆಂಟ್ ಘೋಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಅ.22:
ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ 2021-22ನೇ ಸಾಲಿನಲ್ಲಿ 37.86 ಲಕ್ಷ ರೂ. ಲಾಭಗಳಿಸಿ ಸದಸ್ಯರಿಗೆ ಶೇ.13 ಡಿವಿಡೆಂಟ್ ಘೋಷಿಸಿದೆ. ಗ್ರಾಹಕರ ಸಹಕಾರದಿಂದ ನಿಧಿಗಳ ಸಮರ್ಪಕ ನಿರ್ವಹಣೆ, ಸಾಲಗಳ ವಿತರಣೆ ಹಾಗೂ ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು.

ಸಂಘದ ಪ್ರಧಾನ ಕಛೇರಿಯಲ್ಲಿ ಭಾನುವಾರ ಜರುಗಿದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸಹಕಾರಿಯು 2021-22ನೇ ಸಾಲಿನಲ್ಲಿ ರೂ. 30.19 ಕೋಟಿ ಠೇವಣಿ ಹೊಂದಿದ್ದು 25.11 ಕೋಟಿ ಸಾಲ ನೀಡಿದೆ. ಕಳೆದ ಸಾಲಿನ ಕಾರ್ಯಯೋಜನೆಯಲ್ಲಿ ನಿಗದಿಪಡಿಸಿದ ಠೇವಣಿ, ಸಾಲ, ಅನುತ್ಪಾದಕ ಸಾಲ, ಸುಸ್ತಿ ಸಾಲ ಹಾಗೂ ಮುಂಗಡ ಲಾಭಗಳಿಕೆಯಲ್ಲಿ ನಿಗದಿತ ಗುರಿಯನ್ನು ಮೀರಿ ಸಂಸ್ಥೆ ಪ್ರಗತಿ ಸಾಧಿಸಿದೆ. ಜಿಲ್ಲೆಯಲ್ಲಿಯೇ ಮಾದರಿ ಸಂಸ್ಥೆಯಾಗಿ ರೂಪುಗೊಳ್ಳುತ್ತಿರುವ ಹಿಂದೆ ಗ್ರಾಹಕರ ಸಹಕಾರ ಹಾಗೂ ನೌಕರರ ಶ್ರಮವಿದೆ ಎಂದರು.

ಸಂಘದ ಹಿರಿಯ ಸದಸ್ಯರನ್ನು ಗೌರವಿಸಲಾಯಿತು. ಉತ್ತಮ ಪ್ರಗತಿ ಸಾಧಿಸಿದ ಪ್ರಬಂಧಕರಾದ ಕಿಟ್ಟಣ್ಣ ರೈ, ಶಾಖಾ ಪ್ರಬಂಧಕರಾದ ರಾಘವೇಂದ್ರ, ರಾಜೇಂದ್ರ ದೇವಾಡಿಗ, ಪ್ರಶಾಂತ್ ಹಾಗೂ ಶ್ರೀನಿವಾಸ ಅವರನ್ನು ಸನ್ಮಾನಿಸಲಾಯಿತು.

ನಿರ್ದೇಶಕರುಗಳಾದ ಮಂಜು ಪೂಜಾರಿ ನಾವುಂದ, ರಾಮಕೃಷ್ಣ ಖಾರ್ವಿ, ಮಂಜುನಾಥ ಪೂಜಾರಿ, ಅಣ್ಣಪ್ಪ ಪೂಜಾರಿ ಇದ್ದರು. ಸಂಘದ ಉಪಾಧ್ಯಕ್ಷ ಎಂ. ವಿನಾಯಕ ರಾವ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ಕೆ. ವಾರ್ಷಿಕ ವರದಿ ವಾಚಿಸಿದರು.

Exit mobile version