Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಗ್ರಾಮಾಂತರ ಠಾಣೆಯ ನೂತನ ಪಿಎಸೈ ಆಗಿ ಪವನ್ ನಾಯಕ್ ಅಧಿಕಾರ ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ನೂತನ ಪಿಎಸ್ಐ ಆಗಿ ಪವನ್ ನಾಯಕ್ ಅವರು ಅಧಿಕಾರ ಸ್ವೀಕರಿದ್ದಾರೆ.

2016 ಬ್ಯಾಚಿನ ಅಧಿಕಾರಿಯಾಗಿರುವ ಪವನ್ ನಾಯಕ್ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲದವರು. ಈ ಹಿಂದೆ ಉಪ್ಪಿನಂಗಡಿಯಲ್ಲಿ ಪ್ರೊಬೇಷನರಿ ಅವಧಿ ಮುಗಿಸಿ ಧರ್ಮಸ್ಥಳ ಹಾಗೂ ಬೈಂದೂರಿನಲ್ಲಿ ತಲಾ ಒಂದೂವರೆ ವರ್ಷಗಳ ಕಾಲ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದರು.

ಗ್ರಾಮಾಂತರ ಠಾಣೆಯ ಪಿಎಸ್ಐ ಆಗಿದ್ದ ನಿರಂಜನ್ ಗೌಡ ಅವರನ್ನು ಬೈಂದೂರು ಠಾಣೆಗೆ ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಪವನ್ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರು ಆದೇಶಿಸಿದ್ದರು.

Exit mobile version