Site icon Kundapra.com ಕುಂದಾಪ್ರ ಡಾಟ್ ಕಾಂ

ಸನ್ನಿಧಿ ಕುಟುಂಬಕ್ಕೆ ನೆರವು ನೀಡಿದ ಸಂಸದ ಬಿ. ವೈ. ರಾಘವೇಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು,ಅ.26:
ಶಾಲೆ ಬಿಟ್ಟು ಮನೆಗೆ ಮರಳುತ್ತಿದ್ದ ವೇಳೆ ಕಿರಿದಾದ ಕಾಲುಸಂಕ ದಾಟುವಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದ ಸನ್ನಿಧಿಯ ಪೋಷಕರಾದ ಬೋಳಂಬಳ್ಳಿ ಗ್ರಾಮದ ಮಕ್ಕಿಮನೆ ಮನೆ ನಿವಾಸಿ ಪ್ರದೀಪ್ ಪೂಜಾರಿ ಮತ್ತು ಸುಮಿತ್ರಾ ದಂಪತಿಯನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಭೇಟಿಮಾಡಿ, ಧೈರ್ಯ ತುಂಬಿ ವೈಯುಕ್ತಿಕವಾಗಿ ಧನ ಸಹಾಯವನ್ನು ಮಾಡಿದರು.

ಈ ಸಂದರ್ಭ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿಪಂ ಮಾಜಿ ಸದಸ್ಯರುಗಳಾದ ಬಾಬು ಶೆಟ್ಟಿ, ಶಂಕರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Exit mobile version