Site icon Kundapra.com ಕುಂದಾಪ್ರ ಡಾಟ್ ಕಾಂ

ನವವಿವಾಹಿತೆ ಆತ್ಮಹತ್ಯೆಗೆ ಶರಣು

ಕುಂದಾಪುರ: ತಾಲೂಕಿನ ಕೆರಾಡಿ ಗ್ರಾಮದ ತನ್ನ ತಾಯಿಯ ಮನೆಯಲ್ಲಿ ವಾಸವಿದ್ದ ನವ ವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿದೇಶದಲ್ಲಿ ವೃತ್ತಿಯಲ್ಲಿರುವರುವ ಸತೀಶ್ ಶೆಟ್ಟಿ ಅವರ ಮಡದಿ ಪವಿತ್ರಾ ಶೆಟ್ಟಿ (23) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಚಿತ್ತೂರಿನ ನಿವಾಸಿ ಸತೀಶ್ ಶೆಟ್ಟಿ ಅವರೊಂದಿಗೆ ಕಳೆದ ಆರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಪವಿತ್ರಾ ಕೆರಾಡಿಯ ತಾಯಿ ಮನೆಯಲ್ಲಿ ವಾಸಿಸುತ್ತಿದ್ದರು. ಪತಿ ಸತೀಶ್ ಶೆಟ್ಟಿ ದುಬೈನಲ್ಲಿ ಉದ್ಯೋಗಿಯಾಗಿದ್ದು ಇಬ್ಬರು ಅನೋನ್ಯವಾಗಿದ್ದರು ಎನ್ನಲಾಗಿದೆ. ಬೆಳಗ್ಗೆ ಘಟನೆಗೆ ಮುನ್ನ ತನ್ನ ಪತಿಯೊಂದಿಗೆ ಪವಿತ್ರ ಮೊಬೈಲ್ ಕರೆ ಮಾಡಿ ಮಾತನಾಡಿದ್ದರು ಎನ್ನಲಾಗಿದೆ. ಆದರೆ ನಂತರ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿದ ಪವಿತ್ರಾ ಶೆಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಕುಂದಾಪುರ ಸರ್ಕಾರೀ ಆಸ್ಪತ್ರೆಗೆ ಮರಣೋತ್ತರ ಶವ ಪರೀಕ್ಷೆ ನಡೆಸಿ ಮನೆಯವರಿಗೆ ಒಪ್ಪಿಸಲಾಗಿದೆ. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version