Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಬೈಂದೂರು ವಲಯದ ಐವರು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
2022-23ನೇ ಸಾಲಿನ ಶಿಕ್ಷಕರ ದಿನದ ಅಂಗವಾಗಿ ನೀಡಲಾಗುವ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಬೈಂದೂರು ತಾಲೂಕಿನ ಐವರು ಶಿಕ್ಷಕರು ಆಯ್ಕೆಯಾಗಿದ್ದಾರೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಆಲಂದೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕ ಮಾಧವ ಬಿಲ್ಲವ, ಆಜ್ರಿಗದ್ದೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ದಿನೇಶ್, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಹೊಸೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲಲಿತ ಚಂದ್ರ ಪಟಗಾರ್ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಬೈಂದೂರು ಜ್ಯೂನಿಯರ್ ಕಾಲೇಜಿನ ಹಿಂದಿ ಭಾಷಾ ಶಿಕ್ಷಕ ರವೀಂದ್ರ ಪಿ. ಕೊಲ್ಲೂರು ಮೂಕಾಂಬಿಕಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಹಶಿಕ್ಷಕ ಸಚಿನ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಸೆ.5ರಂದು ಮಣಿಪಾಲ ರಜತಾದ್ರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಆತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದವರನ್ನು ಗೌರವಿಸಲಾಗುವುದು.

ಇದನ್ನೂ ಓದಿ:
► ಉದಯ ಕುಮಾರ್ ಎಂ.ಪಿ ಅವರಿಗೆ ಉತ್ತಮ ಉಪನ್ಯಾಸಕ ರಾಜ್ಯ ಪ್ರಶಸ್ತಿ – https://kundapraa.com/?p=61808 .
► ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಕುಂದಾಪುರ ವಲಯದ ನಾಲ್ವರು ಆಯ್ಕೆ – https://kundapraa.com/?p=61858 .

Exit mobile version