Kundapra.com ಕುಂದಾಪ್ರ ಡಾಟ್ ಕಾಂ

ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಮೇಧಾವಿಗಳು ತಿಳಿದವರು ಶಿಕ್ಷಣದ ಕುರಿತು ಸಾಕಷ್ಟು ವ್ಯಾಖ್ಯಾನ ಪ್ರಕಾರ ಶಿಕ್ಷಣ ಕೇವಲ ಪರೀಕ್ಷೆಗೆ ಮಾತ್ರ ಸೀಮಿತವಾಗಬಾರದು. ಅದರಾಚೆಗೂ ನಮ್ಮ ಬದುಕಿಗೆ ಪೂರಕವಾದ ಶಿಕ್ಷಣವು ದೊರೆತಾಗ ಆ ಶಿಕ್ಷಣಕ್ಕೆ ಅರ್ಥ ಬರುತ್ತದೆ ಎಂದು ಕೋಟ ವಿವೇಕ ಪ್ರೌಢಶಾಲಾ ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು.

ಕುಂದಾಪುರ ಭಂಡಾರ್‌ಕಾರ್ಸ್ ಕಲಾ ವಿಜ್ಞಾನ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಂಡಾರ್ಕಾರ್ಸ್ ಕಾಲೇಜು ಪ್ರಾಂಶುಪಾಲ ಡಾ. ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ. ಜಿ. ಎಂ. ಗೊಂಡ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ. ಸತ್ಯನಾರಾಯಣ ಉಪಸ್ಥಿತರಿದ್ದರು.

ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಲಲಿತಾದೇವಿ ಸ್ವಾಗತಿಸಿದರು. ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ಸರೋಜ ಎಂ ವಂದಿಸಿದರು. ಅರ್ಥಶಾಸ್ತ್ರ ವಿಭಾಗ ಉಪನ್ಯಾಸಕ ದುರ್ಗಾಪ್ರಸಾದ್ ಅತಿಥಿಗಳ ಪರಿಚಯಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುಮಾ ನಿರೂಪಿಸಿದರು.

Exit mobile version