Kundapra.com ಕುಂದಾಪ್ರ ಡಾಟ್ ಕಾಂ

ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲಿ ಸರ್ವೇಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ನಡೆಯಿತು.

ಕಾಲೇಜ್ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ ಮೊಗವೀರ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪ್ರೌಢಶಾಲೆ ಸಿದ್ಧಾಪುರ ಸಹಶಿಕ್ಷಕಿ ವಸಂತಿ ಭಟ್ಮನಕ್ಕಿ ಶಿಕ್ಷಣ-ವಿದ್ಯಾರ್ಥಿ ಕುರಿತು ಮಾತನಾಡಿದರು.

ಪ್ರಗತಿ ಮಹಿಳಾ ವಿವಿಧೋದ್ದೇಶ ಕೋ-ಆಪರೇಟಿವ್ ಸೊಸೈಟಿ ಕಾರ್ಯದರ್ಶಿ ರಾಘವೇಂದ್ರ ಕುಲಾಲ್ ಉಪಸ್ಥಿತರಿದ್ದರು.

ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಅಭಿಜಿತ್ ಅತಿಥಿಗಳ ಪರಿಚಯಿಸಿ, ಅರ್ಥಶಾಸ್ತ್ರ ಉಪನ್ಯಾಸಕ ಶ್ರೀಹರ್ಷ ಸ್ವಾಗತಿಸಿ, ಕನ್ನಡ ಉಪನ್ಯಾಸಕ ಉದಯಾ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ಆಂಗ್ಲ ಭಾಷಾ ಉಪನ್ಯಾಸಕಿ ಪ್ರಿಯಾಂಕ ವಂದಿಸಿದರು.

Exit mobile version