ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತೀಯ ವೈದ್ಯಕೀಯ ಸಂಘ ( ಐಎಂಎ) ಕುಂದಾಪುರ ಆಶ್ರಯದಲ್ಲಿ ಕೆಎಂಸಿ ಮಣಿಪಾಲ ಸಹಯೋಗದಲ್ಲಿ ಮುಂದುವರಿದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ಇಲ್ಲಿನ ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ರೋಟರಿ ಭವನದಲ್ಲಿ ನೆರವೇರಿತು.
ಕೆಎಂಸಿ ನ್ಯೂರೋಸರ್ಜರಿ ವಿಭಾಗದ ಮುಖ್ಯಸ್ಥ ಡಾ. ಗಿರೀಶ್ ಮೆನನ್ ಅವರು ಪಕ್ಷವಾತದಲ್ಲಿ ಶಸ್ತ್ರ ಚಿಕಿತ್ಸೆಯ ಪಾತ್ರ” ಎಂಬ ವಿಷಯ ಬಗ್ಗೆ ಹಾಗೂ ಎಲುಬು ಕೀಲು ವಿಭಾಗದ ಡಾ. ಕೃಷ್ಣಪ್ರಸಾದ ಅವರು “ಹಿಮ್ಮಡಿ ನೋವಿನ ಉಪಶಮನ” ವಿಷಯದ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು.
ಭಾರತೀಯ ವೈದ್ಯಕೀಯ ಸಂಘ ಕುಂದಾಪುರದ ಅಧ್ಯಕ್ಷ, ಎಲುಬು ಕೀಲು ಶಸ್ತ್ರ ಚಿಕಿತ್ಸಾ ತಜ್ನ ಡಾ. ಸಂದೀಪ ನಾವಡ ಪಡುಕೋಣೆ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಕಾರ್ಯದರ್ಶಿ, ಮಾನಸಿಕ ತಜ್ಞ ಡಾ. ರವೀಂದ್ರ ಮುನೊಳಿ ವಂದಿಸಿದರು.