ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರವರ್ತಿತ ಯಳಜಿತ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಹಾಗೂ ಯಳಜಿತ ಕೇಸರಿ ಯುವಕ ಮಂಡಲದ ಸಹಯೋಗದೊಂದಿಗೆ ೧೮ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಇಲ್ಲಿನ ಶಾಲಾ ವಠಾರದಲ್ಲಿ ವಿಜೃಂಭಣೆಯಿಂದ ಜರುಗಿತು.
ಅಂದು ನಡೆದ ಸಭಾ ಕಾರ್ಯಕ್ರಮದಲ್ಲಿ ಯಳಜಿತ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಧನಂಜಯ ಗೌಡ ಕೇಂಜಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉ.ಸ. ಅಧಿಕಾರಿ ಚಂದ್ರ ನಾಯಕ್ ಗೋಳಿಹೊಳೆ ಧಾರ್ಮಿಕ ಉಪನ್ಯಾಸ ನೀಡಿದರು. ಈ ಸಂದರ್ಭ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ನಾಗೇಶ್ ಕೊಠಾರಿ, ಯಳಜಿತ ಶಾಲಾ ಮುಖ್ಯೋಪಧ್ಯಾಯಿನಿ ಪದ್ಮಾವತಿ, ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ತಾಲೂಕು ಯೋಜನಾಧಿಕಾರಿ ವಿನಾಯಕ ಪೈ, ಕೇಸರಿ ಯುವಕ ಮಂಡಲ ಅಧ್ಯಕ್ಷ ರಾಘವೇಂದ್ರ ಪೂಜಾರಿ ತುಂಡಿಹಿತ್ಲು, ಪ್ರಗತಿಬಂಧು ಸ್ವಸಹಾಯ ಸಂಘದ ಅಧ್ಯಕ್ಷರುಗಳಾದ ಗೋವಿಂದ ಗೌಡ, ಪ್ರದೀಪ್ ಪೂಜಾರಿ ಉಪಸ್ಥಿತರಿದ್ದರು. ಕಾರ್ಯದರ್ಶಿ ರಾಘವೇಂದ್ರ ಪೂಜಾರಿ ಅರೆಹೊಳೆ ಕಾರ್ಯಕ್ರಮ ನಿರ್ವಹಿಸಿದರು.