Kundapra.com ಕುಂದಾಪ್ರ ಡಾಟ್ ಕಾಂ

‘ಕರುನಾಡ ಶಾಲೆ’ ಸಿನೆಮಾದ ಮೊದಲ ಸಾಂಗ್ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ನಿರ್ಮಿಸಲಾಗಿರುವ ‘ಕರುನಾಡ ಶಾಲೆ’ ಸಿನೆಮಾದ ಧ್ವನಿಸುರುಳಿಯನ್ನು ಮಲ್ಲೇಶ್ವರಂನ ರೇಣುಕಾಂಬ ಸ್ಟುಡಿಯೋದಲ್ಲಿ ಬಿಡುಗಡೆಗೊಳಿಸಲಾಯಿತು.

ಬಾಲ್ಯದ ನೆನಪುಗಳನ್ನು ನೆನಪಿಸುವಂಥ ದೃಶ್ಯಗಳನ್ನು ಸಂಯೋಜಿಸಲಾಗಿರುವ ಗೀತೆಯೊಂದನ್ನು ಚಿತ್ರತಂಡ ಬಿಡುಗಡೆಗೊಳಿಸಿತು. ನಾಯಕನ ತಂದೆ ಪಾತ್ರದಲ್ಲಿ ಹಿರಿಯ ನಟ ರಮೇಶ್ ಭಟ್ ಅಭಿನಯಿಸಿದ್ದು, ಆಯುರ್ ಸ್ವಾಮಿ ನಾಯಕನಾಗಿ ನಟಿಸಿದ್ದಾರೆ. ಉಳಿದಂತೆ ರಿಯಾ ದೇವಾಡಿಗ, ರಾಜೀವ್ ಕೊಠಾರಿ, ರಘು ಪಾಂಡೇಶ್ವರ, ಸ್ಪೂರ್ತಿ ದೊಡ್ಮನೆ, ಸ್ಮಿತಾ, ಉಲ್ಲಾಸ್, ಮನೀಶ್, ನಾಗರಾಜ್ ಅಭಿನಯಿಸಿದ್ದಾರೆ.’

ಜಿ.ಆರ್. ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರಕ್ಕೆ ಮುತ್ತಾರೀಫ್ ತೆಕ್ಕಟ್ಟೆಯವರ ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನ ಮಾಡಿದ್ದಾರೆ. ದಿಲ್ ಶಾದ್ ಬಂಡವಾಳ ಹೂಡಿದ್ದಾರೆ. ಗಿರೀಶ್, ಯೋಗೇಂದ್ರ ಕನ್ನುಕೆರೆ, ಸಚಿನ್ ಸಹ ನಿರ್ಮಾಪಕರಾಗಿ ಜವಾಬ್ದಾರಿ ಹೊತ್ತುಕೊಂಡರೆ, ಆಕಾಶ್ ಪರ್ವರ ಸಂಗೀತ, ಆಯುರ್ ಸ್ವಾಮಿ ಸಾಹಿತ್ಯ – ಸಂಕಲನ, ರಾಜೇಶ್ ಕೃಷ್ಣನ್ ಹಿನ್ನೆಲೆ ಗಾಯನ, ಜಯರಾಮ್ ಆಲೂರು ಛಾಯಾಗ್ರಹಣ, ರಾಘವರ ನೃತ್ಯ ನಿರ್ದೇಶನವಿದೆ. ಸರ್ಕಾರಿ ಶಾಲೆಗಳ ಪ್ರಗತಿಗಾಗಿ ನಾಯಕ ಪಡುವ ಸಾಹಸವೆ ಚಿತ್ರದ ಪ್ರಮುಖ ಕಥಾವಸ್ತುವಾಗಿದೆ.

Exit mobile version