Kundapra.com ಕುಂದಾಪ್ರ ಡಾಟ್ ಕಾಂ

ಪುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಅ.09:
ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಗುರುಕುಲ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ಜರುಗಿದ ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದು ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು, ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Exit mobile version