Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ತಾಲೂಕು ಆಡಳಿತದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಸೆ.10:
ಇಲ್ಲಿನ ಮಿನಿ ವಿಧಾನಸೌಧದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲೂಕು ಆಡಳಿತ, ತಾ.ಪಂ. ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಅವರ 168ನೇ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಮಾತನಾಡಿ, ಕೆಲವೊಂದು ಅನಿಷ್ಟ ಪದ್ಧತಿಗಳು ತಾಂಡವವಾಡುತ್ತಿದ್ದಾಗ ಶ್ರೀ ನಾರಾಯಣ ಗುರುಗಳು ಜನಿಸಿ ಬಂದು ಜಾತಿ ವೈಷಮ್ಯ ಎಂಬ ಅಜ್ಞಾನವನ್ನು ತೊಡೆದು ಹಾಕಿ ಶಿಕ್ಷಣದ ಮೂಲಕ ಸಾಮಾಜಿಕ ಕ್ರಾಂತಿಯನ್ನು, ಶೋಷಿತ ಮತ್ತು ಹಿಂದುಳಿದ ವರ್ಗಗಳಿಗೆ ಸಾಮಾಜಿಕ ಸಮಾನತೆಯನ್ನು ದೊರಕಿಸಿಕೊಟ್ಟ ಮಹಾನ್ ಸಂತರು. ಮಾತ್ರವಲ್ಲದೆ ಮನುಷ್ಯ ಧರ್ಮವನ್ನು ಪ್ರತಿಪಾದಿಸಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದರು.

ಕುಂದಾಪುರ ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಅವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಕೋರಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೆಕರ್, ಬಿಲ್ಲವ ಮುಖಂಡರಾದ ಮಂಜು ಬಿಲ್ಲವ, ರಾಜು ಪೂಜಾರಿ ಜಡ್ಕಲ್ ಮಾತನಾಡಿದರು.

ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ., ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಎನ್., ಉಪತಹಶೀಲ್ದಾರ್ ಚಂದ್ರಶೇಖರ್, ವಿವಿಧ ಇಲಾಖಾ ಅಧಿಕಾರಿಗಳು, ಸಿಬಂದಿ ವರ್ಗ, ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯದರ್ಶಿ ಗಣೇಶ್ ವಿಠಲವಾಡಿ, ಉಪಾಧ್ಯಕ್ಷ ಭಾಸ್ಕರ ಬಿಲ್ಲವ, ಮಹಿಳಾ ಘಟಕಾಧ್ಯಕ್ಷೆ ಸುಮನಾ ಬಿದ್ಕಲ್ಕಟ್ಟೆ, ಹೇಮಾವತಿ, ಜಾನಕಿ ಬಿಲ್ಲವ, ಶೈಕ್ಷಣಿಕ ಹಾಗೂ ದತ್ತಿ ಸಂಸ್ಥೆಯ ಕಾರ್ಯದರ್ಶಿ ಭಾಸ್ಕರ ವಿಠಲವಾಡಿ, ನಾರಾಯಣ ಗುರು ಯುವಕ ಮಂಡಲದ ಅಧ್ಯಕ್ಷ ಅಜಿತ್, ಪ್ರಮುಖರಾದ ದಿವಾಕರ ಕಡ್ಗಿಮನೆ, ರಾಜೇಶ್ ಕಡ್ಗಿಮನೆ, ಆನಂದ ಕೊಡೇರಿ, ಯೋಗೀಶ್ ಕೋಡಿ, ಮತ್ತಿತರರು ಉಪಸ್ಥಿತರಿದ್ದರು.

ಉಪತಹಶೀಲ್ದಾರ್ ವಿನಯ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ದನ್ನೂ ಓದಿ:
► ಬೈಂದೂರು ತಹಶೀಲ್ದಾರರ ಕಛೇರಿಯಲ್ಲಿ 168ನೇ ನಾರಾಯಣ ಗುರು ಜಯಂತಿ ಆಚರಣೆ – https://kundapraa.com/?p=62032 .

Exit mobile version