Kundapra.com ಕುಂದಾಪ್ರ ಡಾಟ್ ಕಾಂ

ಗಂಗಾನಾಡು: ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಶುಚಿತ್ವ ಹಾಗೂ ಆಹಾರ ಪದ್ಧತಿ ನಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಬಿ.ಪಿ, ಶುಗರ್ ಮುಂತಾದ ಕಾಯಿಲೆಗಳಿಂದ ಬಳಲುವವರಿಗೆ ಹೆಚ್ಚಾಗಿ ಕಣ್ಣಿನ ಸಮಸ್ಯೆಯೂ ಕಾಣಿಸುಕೊಳ್ಳುತ್ತದೆ. ಹಾಗಾಗಿ ಆಗಾಗ್ಗೆ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡು, ಆರೋಗ್ಯ ಸಲಹೆಗಳನ್ನು ಪಡೆದುಕೊಳ್ಳುವುದು ಸೂಕ್ತ ಎಂದು ಬೈಂದೂರು ಸರಕಾರಿ ಆಸ್ಪತ್ರೆಯ ವೈದ್ಯೆ ಡಾ. ನಿವೇದಿತಾ ಹೇಳಿದರು.

ಅವರು ರೋಟರಿ ಕ್ಲಬ್ ಬೈಂದೂರು ನೇತೃತ್ವದಲ್ಲಿ, ದೃಷ್ಟಿ (ಪ್ರ)ದಾನ ಯೋಜನೆ 2022-22 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು, ಭಾರತೀಯ ರೆಡ್ ಕ್ರಾಸ್ ಬೈಂದೂರು ಘಟಕ ಹಾಗೂ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು – ಮುದ್ದುಮನೆ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಗಂಗಾನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾದ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರದವನ್ನುಉದ್ಘಾಟಿಸಿ ಮಾತನಾಡಿದರು.

ಬೈಂದೂರು ರೋಟರಿ ಅಧ್ಯಕ್ಷ ಎಚ್. ಉದಯ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿರೂರು ಮುದ್ದುಮನೆ ಪಾರ್ವತಿ ಮಹಾಬಲ ಶೆಟ್ಟಿ ಕಣ್ಣಿನ ಆಸ್ಪತ್ರೆಯ ಪ್ರತಿನಿಧಿ ಶಂಕರ ಶೆಟ್ಟಿ, ವೈದ್ಯರಾದ ಡಾ. ಅಭಿನಯ, ಜಿಲ್ಲಾ ರೋಟರಿ ಲಿಟರೆಸಿ ಛೇರ್ಮನ್ ಐ ನಾರಾಯಣ, ಬೈಂದೂರು ರೆಡ್ಕ್ರಾಸ್ ಸಭಾಪತಿ ನಿತಿನ್ ಶೆಟ್ಟಿ, ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಶಾಲಾ ಎಸ್ಡಿಎಂಸಿ ಅಧ್ಯಕ್ಷ ರಾಜು ಮರಾಠಿ, ಎಸ್ಡಿಸಿ ಅಧ್ಯಕ್ಷ ರಾಜು ಮರಾಠಿ ಡಿ., ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಪ್ರಭಾಕರ ಬಿಲ್ಲವ ಸ್ವಾಗತಿಸಿ, ಪತ್ರಕರ್ತ ಸುನಿಲ್ ಹೆಚ್. ಜಿ. ಬೈಂದೂರು ವಂದಿಸಿದರು. ಬೈಂದೂರು ರೋಟರಿ ಕಾರ್ಯದರ್ಶಿ ಸುಧಾಕರ ಪಿ. ಬೈಂದೂರು ಕಾರ್ಯಕ್ರಮ ನಿರೂಪಿಸಿದರು. ಪತ್ರಕರ್ತ ಸುಶಾಂತ್ ಬೈಂದೂರು ಸಹಕರಿಸಿದರು. 95ಕ್ಕೂ ಹೆಚ್ಚು ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.

Exit mobile version