Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಉಚಿತ ಆರೋಗ್ಯ ತಪಾಸಣಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಭಾರತೀಯ ಜನತಾ ಪಾರ್ಟಿ ಬೈಂದೂರು ವಲಯದ ಆಶ್ರಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆ ಪ್ರಯುಕ್ತ ನಡೆಯುತ್ತಿರುವ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಉಡುಪಿ ಜಿಲ್ಲಾ ಆಸ್ಪತ್ರೆ ಸಹಯೋಗದೊಂದಿಗೆ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಜರಗಿತು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಪ್ರಧಾನಿ ನರೇಂದ್ರ ಮೋದಿಯವರು ವಿಶ್ವ ನಾಯಕರಾಗಿ ಗುರುತಿಸಿಕೊಂಡು, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯಗುತ್ತಿದ್ದಾರೆ. ಜನರಿಗೆ ಉತ್ತಮ ಆರೋಗ್ಯ ನೀಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನೇಕ ಯೋಜನೆಗಳ ಮೂಲಕ ಜನರಿಗೆ ಸೌಲಭ್ಯ ನೀಡುತ್ತಿದೆ. ಜನರು ಆರೋಗ್ಯದ ಬಗ್ಗೆ ಕಾಳಜಿಯನ್ನು ವಹಿಸಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಕೊಳ್ಳುತ್ತಿರಬೇಕು ಎಂದರು.

ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ ಪೂಜಾರಿ ಜೆಡ್ಡು, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ, ಕುಂದಾಪುರ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಯಶಸ್ವಿನಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಹರೀಶ ಮೇಸ್ತ, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಬಿಜೆಪಿ ಬೈಂದೂರು ಮಂಡಲ ಮಹಿಳಾ ಮೋರ್ಚಾದ ಶಾಂತಿ ಖಾರ್ವಿ, ಅನಿತಾ ಆರ್.ಕೆ., ಗ್ರಾಪಂ ಸದಸ್ಯರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿಗಾರ್ ಸ್ವಾಗತಿಸಿ ವಂದಿಸಿದರು.

Exit mobile version