ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ವಿ.ವಿ.ವಿ ಮಂಡಳಿ (ರಿ) ಹೆಮ್ಮಾಡಿ ಇದರ ಸಾಮಾನ್ಯ ಸಭೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರನ್ನು ಪದನಿಮಿತ್ತ ನಾಮ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ.
ಗಣೇಶ ಮೊಗವೀರ ಅವರು ಸಮರ್ಪಣಾ ಎಜುಕೇಶನ್ ಟ್ರಸ್ಟ್ (ರಿ) ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.